ವಿಶ್ವ ಅಯೋಡಿನ್ ದಿನಾಚರಣೆ

ಉಡುಪಿ, ನ.2:ಜಿಲ್ಲಾ ಮಟ್ಟದ ವಿಶ್ವ ಅಯೋಡಿನ್ ದಿನಾಚರಣೆ ಸಂತ ಮೇರಿ ಕನ್ನಡ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.
ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರೋಹಿಣಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ, ಸಂತ ಮೇರಿ ಕನ್ನಡ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೀಪ್ ರೈ, ಸಂತ ಮೇರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ವನಿತಾ, ಜಿಲ್ಲಾ ಆರೋಗ್ಯ ಇಲಾಖೆಯ ಆರೋಗ್ಯ ಮೇಲ್ವಿಚಾರಕ ಆನಂದ ಗೌಡ, ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ವಿಜಯ ಬಾಯಿ ಉಪಸ್ಥಿತರಿದ್ದರು.
Next Story





