ಬಂಟ್ವಾಳ: ವಿವಿಧ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ

ಬಂಟ್ವಾಳ, ನ. 1: ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ಬಿ.ಸಿ.ರೋಡ್ ವೃತ್ತದಿಂದ ಪುಂಜಾಲಕಟ್ಟೆವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಗೊಳಿಸಲು ಕೇಂದ್ರ ರಸ್ತೆ ನಿಧಿಯಿಂದ 157 ಕೋಟಿ ರೂ. ಅನುದಾನ ಮಂಜೂರುಗೊಳಿಸಲು ಯಶಸ್ವಿಯಾಗಿದ್ದೇನೆ ಎಂದು ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 19.75 ಕೋ. ರೂ. ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಈ ರಸ್ತೆ ಸಂಪೂರ್ಣ ಕಾಂಕ್ರಿಟ್ ರಸ್ತೆಯಾಗಲಿದೆ ಎಂದ ಅವರು, ಬಂಟ್ವಾಳ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳಿಗಾಗಿ 6 ಯೋಜನೆಗಳು ಈಗಾಗಲೆ ಮಂಜೂರುಗೊಂಡು ಟೆಂಡರು ಪ್ರಕ್ರಿಯೆ ಮುಗಿದಿದೆ. ಇನ್ನೂ 2 ಯೋಜನೆಗಳು ಮಂಜೂರಾತಿ ಹಂತದಲ್ಲಿದೆ ಎಂದರು.
ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್, ಜಿಪಂ ಸದಸ್ಯರಾದ ಬಿ. ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಕೆ. ಮಾಯಿಲಪ್ಪ ಸಾಲ್ಯಾನ್, ಕಾರಿಂಜದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ, ತಾಪಂ ಮಾಜಿ ಸದಸ್ಯ ಸತೀಶ್ ಕುಮಾರ್ ಪಿಲಿಂಗಾಲು, ರಾಜ್ಯ ಗೇರು ಅಭಿವೃದ್ಧಿ ನಿಗಮ ನಿರ್ದೇಶಕ ಜಗದೀಶ ಕೊಯಿಲ, ಪರಿಶಿಷ್ಟ ಜಾತಿ, ಪಂಗಡದ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಜನಾರ್ದನ ಚಂಡ್ತಿಮಾರ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ. ಬಂಗೇರ, ಗ್ರಾಪಂ ಸದಸ್ಯ ಚಂದ್ರಶೇಖರ ಕರ್ಣ, ರಾಷ್ಟ್ರೀಯ ಹೆದ್ದಾರಿ ಅಭಿಯಂತರ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಮೂರ್ಜೆ-ನೇರಳಕಟ್ಟೆ ರಸ್ತೆಗೆ 1.80 ಕೋ. ರೂ., ಕಾಡಬೆಟ್ಟು-ಬಸ್ತಿಕೋಡಿ ರಸ್ತೆಗೆ 3.45 ಕೋ.ರೂ., ಕರಿಮಲೆ- ಅಣ್ಣಳಿಕೆ ರಸ್ತೆಗೆ 4 ಕೋ. ರೂ. , ಬಿ.ಸಿ.ರೋಡ್ ಜಂಕ್ಷನ್-ಪಾಣೆಮಂಗಳೂರು ವೃತ್ತ ರಸ್ತೆಗೆ 3.5 ಕೋ. ರೂ., ಗೋಳ್ತಮಜಲು-ಮಂಚಿ ರಸ್ತೆಗೆ 2 ಕೋ.ರೂ. , ಕೊಳ್ನಾಡು ಗ್ರಾಮದ ಅಗರಿ-ಕುಲಾಲು ರಸ್ತೆ, ನೆಕ್ಕರಕಾಡು ಸೇತುವೆ ನಿರ್ಮಾಣಕ್ಕೆ 5 ಕೋ. ರೂ. ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಶಿಲಾನ್ಯಾಸ ನೆರವೇರಿಸಿದರು.







