ನ.3ರಿಂದ ‘ಪ್ರೇರಣಾ 2017’
ಮಂಗಳೂರು, ನ.2: ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ದೇರಳಕಟ್ಟೆ ಇದರ ಆಶ್ರಯದಲ್ಲಿ ಅಂತರ್‌ಕಾಲೇಜು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಪ್ರೇರಣಾ 2017’ ನ.3 ಮತ್ತು 4ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಪೌರ್ವಾತ್ಯ ಮತ್ತು ಪಾಶ್ಚಿಮಾತ್ಯ ಸಮೂಹ ಗಾಯನ, ವಿಷಯಾಧಾರಿತ ನೃತ್ಯ, ಜನಪದ ನೃತ್ಯ, ಭರತನಾಟ್ಯ, ನಾಕೌಟ್ ನೃತ್ಯ, ಮೈಮ್, ಆವೆಮಣ್ಣಿನಿಂದ ಕಲಾಕೃತಿ ತಯಾರಿ, ಕಸದಿಂದ ರಸ.. ಇತ್ಯಾದಿ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 200ಕ್ಕೂ ಹೆಚ್ಚಿನ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ನವೆಂಬರ್ 3ರಂದು ಬೆಳಗ್ಗೆ 9.30ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಎಕ್ಸ್‌ಪರ್ಟ್ ಪಿಯು ಕಾಲೇಜು, ವಳಚ್ಚಿಲ್ ಇದರ ಪ್ರಾಂಶುಪಾಲ ಡಾ ಎನ್.ಕೆ.ವಿಜಯನ್ ಕರಿಪ್ಪಲ್ ಹಾಗೂ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಹೆಲ್ಲೊ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





