ಸರಕಾರದಿಂದ ಸುಂಟಿಕೊಪ್ಪ ಗ್ರಾಮದ ಅಭಿವೃದ್ಧಿಗೆ 80 ಲಕ್ಷ ರೂ. ಬಿಡುಗಡೆ: ಶಾಸಕ ಅಪ್ಪಚ್ಚು ರಂಜನ್

ಸುಂಟಿಕೊಪ್ಪ, ನ.3: ರಾಜ್ಯ ಸರಕಾರದ ವಿಶೇಷ ಪ್ಯಾಕೇಜ್‍ನಡಿ ಸುಂಟಿಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 80 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಇಲ್ಲಿನ ಪಂಪ್‍ಹೌಸ್ ಬಡಾವಣೆಯ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸರಕಾರದಿಂದ ಕೊಡಗಿನ ಅಲ್ಪಸಂಖ್ಯಾತರ ವರ್ಗದ ಕಲ್ಯಾಣಕ್ಕೆ 50 ಲಕ್ಷ ರೂ. ಸುಂಟಿಕೊಪ್ಪಕ್ಕೆ ಮೀಸಲಿಡಲಾಗಿದೆ. ಅಲ್ಲದೆ, ಪರಿಶಿಷ್ಟ ಜಾತಿ ಪಂಗಡದವರ ಅಭಿವೃದ್ಧಿಗೆ ಸುಂಟಿಕೊಪ್ಪಕ್ಕೆ 10 ಲಕ್ಷ ರೂ. ಲಭ್ಯವಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನಗಳು ಒಟ್ಟಾಗಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿನಯೋಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಂ.ಇಬ್ರಾಹೀಂ, ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಪಿ.ಚಂದ್ರಕಲಾ, ಪಿ.ಎಂ.ಲತೀಫ್, ತಾ.ಪಂ ಸದಸ್ಯೆ ಓಡಿಯಪ್ಪ ವಿಮಾಲಾವತಿ, ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಗ್ರಾ.ಪಂ ಸದಸ್ಯರಾದ ಬಿ.ಎಂ.ಸುರೇಶ್, ಸಿ.ಚಂದ್ರ, ಕೆ.ಇ.ಕರೀಂ, ಎ.ಶ್ರೀಧರ್ ಕುಮಾರ್, ಶಾಹಿದ್, ನಾಗರತ್ನ, ವಳ್ಳಿ, ಶಿವಮ್ಮ ಮಹೇಶ್, ಗ್ರಾ.ಪಂ ಮಾಜಿ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್,ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, ಬಿಜೆಪಿ ನಗರಾಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಲೋಕೋಪಯೋಗಿ ಅಭಿಯಂತರ ಪೀಠರ್, ಗುತ್ತಿಗೆದಾರ ಸುರೇಶ್ ಕುಮಾರ್, ಪಂಚಾಯತ್ ಕಾರ್ಯದರ್ಶಿ ನಿತ್ಯಾ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.







