ಡಿವೈಡರ್ ಗೆ ಕಾರು ಢಿಕ್ಕಿ: ಓರ್ವ ಮೃತ್ಯು
ಶಿವಮೊಗ್ಗ, ನ.3: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಡಿವೈಡರ್‍ಗೆ ಢಿಕ್ಕಿ ಹೊಡೆದ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇತರೆ ಮೂವರು ಯುವಕರಿಗೆ ಗಾಯವಾಗದೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಗರದ ಹೊರವಲಯ ಚೆನ್ನಾಮುಂಭಾಪುರ ಗ್ರಾಮದ ಬಳಿ ಗುರುವಾರ ರಾತ್ರಿ ನಡೆದಿದೆ.
ನವುಲೆ ಗ್ರಾಮದ ನಿವಾಸಿ ಮಂಜುನಾಥ್ (25) ಮೃತಪಟ್ಟ ಕಾರು ಚಾಲಕ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಸಬ್ ಇನ್ ಸ್ಪೆಪೆಕ್ಟರ್ ರಾಂಕುಮಾರ್ ಭೇಟಿಯಿತ್ತು ಪರಿಶೀಲಿಸಿದರು.
ಚಾಲಕನ ಅಜಾಗರೂಕ, ನಿರ್ಲಕ್ಷ್ಯದ ಚಾಲನೆಯೇ ಅವಘಡಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾರು!: ಮೃತ ಮಂಜುನಾಥ್ ಅವರಿಗೆ ಸೇರಿದ ಫೋರ್ಡ್ ಐಕಾನ್ ಕಾರಿನಲ್ಲಿ ಸ್ನೇಹಿತರಾದ ಪ್ರವೀಣ್, ಹರ್ಷ ಹಾಗೂ ದರ್ಶನ್‍ರವರೊಂದಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರು ಪಲ್ಟಿಯಾಗಿ ಹಲವು ಸುತ್ತು ಉರುಳಿ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆದರೆ ಕಾರಿನಲ್ಲಿದ್ದ ಮೂವರು ಸ್ನೇಹಿತರಿಗೆ ಗಾಯವೂ ಆಗದೆ ಪ್ರಾಣಾಪಾಯದಿಂದ ಪಾರಾಗಿರುವುದು ಸ್ಥಳೀಯ ನಾಗರಿಕರನ್ನು ಚಕಿತಗೊಳ್ಳುವಂತೆ ಮಾಡಿದೆ.







