Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಪ್ರತಿದಿನ 3 ಮಕ್ಕಳ...

ದಿಲ್ಲಿಯಲ್ಲಿ ಪ್ರತಿದಿನ 3 ಮಕ್ಕಳ ಅತ್ಯಾಚಾರ : ಸಮೀಕ್ಷಾ ವರದಿ

ರಾಜಧಾನಿಗೆ ಕಪ್ಪು ಚುಕ್ಕೆ

ವಾರ್ತಾಭಾರತಿವಾರ್ತಾಭಾರತಿ3 Nov 2017 7:43 PM IST
share
ದಿಲ್ಲಿಯಲ್ಲಿ ಪ್ರತಿದಿನ 3 ಮಕ್ಕಳ ಅತ್ಯಾಚಾರ : ಸಮೀಕ್ಷಾ ವರದಿ

ಹೊಸದಿಲ್ಲಿ, ನ.3: ದೇಶದ ರಾಜಧಾನಿ ದಿಲ್ಲಿಯಲ್ಲಿ 2015ರಲ್ಲಿ 927 ಮಕ್ಕಳನ್ನು ಅತ್ಯಾಚಾರ ನಡೆಸಲಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೀಕರಣ ವಿಭಾಗ (ಎನ್‌ಸಿಆರ್‌ಬಿ)ಯ ಇತ್ತೀಚಿನ ವರದಿಯಲ್ಲಿ ತಿಳಿಸಲಾಗಿದೆ.

ಅಂದರೆ ರಾಷ್ಟ್ರದ ರಾಜಧಾನಿಯಲ್ಲಿ ಪ್ರತೀ ದಿನ ಸುಮಾರು 3 ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ಇದಕ್ಕೆ ಕಾಮಪ್ರಚೋದಕ ಸಾಹಿತ್ಯ, ಸಿನೆಮಾ ಹಾಗೂ ಮನಸ್ಥಿತಿ ಕಾರಣ ಎಂದು ವರದಿಯಲ್ಲಿ ತಿಳಿಸಲಾಗಿದೆ.

   ಎಳೆಯ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಕ್ಕೆ ಪ್ರಮುಖ ಕಾರಣ ಜನರ ಮನಸ್ಥಿತಿ.ಈ ನಿಟ್ಟಿನಲ್ಲಿ ಜನರನ್ನು ತಿದ್ದಿ ಅವರ ಚಿಂತನೆಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಮಕ್ಕಳ ಹಕ್ಕುಗಳ ಸಂಘಟನೆಯ ಕಾರ್ಯಕರ್ತೆ ಭಾರತಿ ಅಲಿ ಹೇಳುತ್ತಾರೆ.

      ಎಳೆಯ ಮಕ್ಕಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳನ್ನು ನಿರ್ವಹಿಸಿರುವ ವಕೀಲ ಅನಂತ್ ಕುಮಾರ್ ಅಸ್ತಾನ ಅವರ ಪ್ರಕಾರ, ದಿಲ್ಲಿಗೆ ದೇಶದ ಇತರೆಡೆಯಿಂದ ಭಾರೀ ಸಂಖ್ಯೆಯಲ್ಲಿ ಜನರು ವಲಸೆ ಬರುತ್ತಾರೆ. ಗ್ರಾಮೀಣ ಪ್ರದೇಶದಲ್ಲಿ ಸಾಮಾನ್ಯವಾಗಿ ಒಂದು ಪ್ರದೇಶದಲ್ಲಿ ಒಂದೇ ಸಮುದಾಯದ ಜನತೆ ಹೆಚ್ಚಾಗಿ ವಾಸವಾಗಿರುವ ಕಾರಣ ಅಲ್ಲಿ ಮಗುವಿಗೆ ದ್ವಿತೀಯ ಸುರಕ್ಷತಾ ವಲಯ ಲಭ್ಯವಾಗುತ್ತದೆೆ(ಮನೆಯವರು ಪ್ರಥಮ ಸುರಕ್ಷತಾ ವಲಯ). ಆದರೆ ವಲಸಿಗರೇ ಹೆಚ್ಚಿರುವ ದಿಲ್ಲಿಯಲ್ಲಿ ಮಕ್ಕಳಿಗೆ ಈ ದ್ವಿತೀಯ ಸುರಕ್ಷಿತಾ ವಲಯದ ಕೊರತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣದ ತನಿಖೆಯ ಸಂದರ್ಭ ಅಶ್ಲೀಲ ಸಾಹಿತ್ಯದ ಪ್ರಭಾವದಿಂದ ಅತ್ಯಾಚಾರಕ್ಕೆ ಪ್ರೇರಣೆ ದೊರಕಿರುವುದು ದೃಢಪಟ್ಟಿದೆ ಎಂದವರು ಹೇಳಿದ್ದಾರೆ. ಒಂದು ಪ್ರಕರಣದಲ್ಲಿ, ಅತ್ಯಾಚಾರ ನಡೆಸಿದ್ದ 18ರ ಹರೆಯದ ಅಪರಾಧಿಯೋರ್ವ, ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ ಬಳಿಕ ತನಗೆ ತನ್ನನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾನೆ.

 ಅಲ್ಲದೆ ಬಹುತೇಕ ಪ್ರಕರಣಗಳಲ್ಲಿ ಸಂತ್ರಸ್ತ ಶಿಶುವಿನ ಪೋಷಕರಿಬ್ಬರೂ ದುಡಿಯಲು ತೆರಳುವ ಕಾರಣ ಮಗುವನ್ನು ನೆರೆಮನೆಯವರ ರಕ್ಷಣೆಗೆ ಒಪ್ಪಿಸುತ್ತಾರೆ. ಇದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಅವಕಾಶ ಮಾಡಿಕೊಡುತ್ತದೆ . ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಿ, ಇಂತಹ ಕೃತ್ಯಗಳಿಂದ ದೂರ ಇರುವಂತೆ ಅವರ ಮನಸ್ಥಿತಿಯನ್ನು ಬದಲಿಸಬೇಕು ಎಂದು ಅಸ್ತಾನ ತಿಳಿಸಿದ್ದಾರೆ.

 ಬುಧವಾರ ದಿಲ್ಲಿಯ ಅಮನ್ ವಿಹಾರ್ ಎಂಬಲ್ಲಿ ನಡೆದ ಘಟನೆಯಲ್ಲಿ 18 ತಿಂಗಳ ಶಿಶುವಿನ ಮೇಲೆ ನೆರೆಮನೆಯ 33 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದ. ಸಮಾಜಸೇವಾ ಸಂಸ್ಥೆ , ಮಕ್ಕಳ ಹಕ್ಕುಗಳಿಗೆ ಹೋರಾಟ ನಡೆಸುವ ಸಂಸ್ಥೆಗಳ ನಿರಂತರ ಪ್ರಯತ್ನದ ಹೊರತಾಗಿಯೂ ಈ ರೀತಿಯ ಕೃತ್ಯಗಳು ಪುನರಾವರ್ತನೆಯಾಗುತ್ತಿರುವುದು ಕಳವಳಕಾರಿಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X