Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉತ್ತಮ ಗುಣಮಟ್ಟದ ಹೆದ್ದಾರಿ, ಸೇತುವೆ...

ಉತ್ತಮ ಗುಣಮಟ್ಟದ ಹೆದ್ದಾರಿ, ಸೇತುವೆ ನಿರ್ಮಾಣಕ್ಕೆ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ3 Nov 2017 8:32 PM IST
share
ಉತ್ತಮ ಗುಣಮಟ್ಟದ ಹೆದ್ದಾರಿ, ಸೇತುವೆ ನಿರ್ಮಾಣಕ್ಕೆ ಆದ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.3: ಜನರ ಅನುಕೂಲ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಗುಣಮಟ್ಟದ ಹೆದ್ದಾರಿ ಹಾಗೂ ಸೇತುವೆ ನಿರ್ಮಾಣದಲ್ಲಿ ಇಂಡಿಯನ್ ರೋಡ್ಸ್ ಕಾಂಗ್ರೆಸ್ ತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ನಗರದ ಅರಮನೆ ಮೈದಾನದಲ್ಲಿರುವ ಗಾಯಿತ್ರಿ ವಿಹಾರದಲ್ಲಿ ಇಂಡಿಯನ್ ರೋಡ್ಸ್ ಕಾಂಗ್ರೆಸ್ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ನ.3 ರಿಂದ 6 ರವರೆಗೆ ಹಮ್ಮಿಕೊಳ್ಳಲಾದ 78ನೆ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಮಾವೇಶವು 13 ವರ್ಷಗಳ ನಂತರ ರಾಜ್ಯದಲ್ಲಿ ನಡೆಯುತ್ತಿದ್ದು, ಇದರಲ್ಲಿ ಸುಮಾರು 3000 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಜನರ ಜೀವನಾಡಿಯಾಗಿರುವ ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಶ್ರಮಿಸುತ್ತಿದೆ ಎಂದು ಹೇಳಿದರು.

ಉತ್ತಮ ರಸ್ತೆ ಸಾರಿಗೆ ವ್ಯವಸ್ಥೆ ರಾಜ್ಯ ಹಾಗೂ ದೇಶಿಯ ಆರ್ಥಿಕ ಸುಧಾರಣೆಗೆ ಸಾಕ್ಷಿಯಾಗಿವೆ. ನಾವು ಹೆಚ್ಚು ಸುರಕ್ಷತೆಯ ಕಡೆ ಗಮನಹರಿಸುವುದು ಅವಶ್ಯಕ. ಭಾರತದ ಏಳಿಗೆಯಲ್ಲೂ ಇದು ಮುಖ್ಯ ಪಾತ್ರ ವಹಿಸಿದೆ ಎಂದ ಅವರು, ಐಟಿ ಹಬ್ ಎಂದೇ ಕರೆಯಲಾಗುವ ಬೆಂಗಳೂರು ಹಾಗೂ ರಾಜ್ಯದ ಇತರ ತಾಲ್ಲೂಕುಗಳಲ್ಲಿ ಸಾರಿಗೆ ವ್ಯವಸ್ಥೆ ಕಳೆದ ದಶಕಕ್ಕಿಂತಲೂ ಹೆಚ್ಚು ಅಭಿವೃದ್ಧಿ ಹೊಂದಿದೆ. ಉತ್ತಮ ಯೋಜನೆಗಳು ಜಾರಿಗೆ ಬಂದಿದೆ. ನುರಿತ ಇಂಜಿನಿಯರ್‌ಗಳು, ಒಳ್ಳೆಯ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವು 1500 ಕಿ.ಮೀ.ರಸ್ತೆಯನ್ನು 601 ಕೋಟಿಗಳಲ್ಲಿ ಮೇಲ್ದರ್ಜೆಗೊಳಿಸಿದೆ. ವಿಶ್ವಬ್ಯಾಂಕ್ ಅನುದಾನದಿಂದ 2585 ಕಿ.ಮೀ.ಗಳ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಕಳೆದ ನಾಲ್ಕುವರೆ ವರ್ಷಗಳಿಂದ ರಾಜ್ಯ ಸರಕಾರ 10,920 ಕಿ.ಮೀ.ಹೆದ್ದಾರಿ ರಸ್ತೆಯನ್ನು 10,961 ಕೋಟಿ ರೂ.ಗಳಲ್ಲಿ ಹಾಗೂ 21,101 ಕಿ.ಮೀ. ರಸ್ತೆಗಳನ್ನು 8430 ಕೋಟಿ ರೂ.ಗಳಲ್ಲಿ ಅಭಿವೃದ್ಧಿಗೊಳಿಸಲಾಗಿದೆ. ಅಲ್ಲದೆ ಇನ್ನೂ ಹಲವಾರು ರಸ್ತೆ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

ಇಂಡಿಯನ್ ರೋಡ್ಸ್ ಕಾಂಗ್ರೆಸ್‌ನ ಅಧ್ಯಕ್ಷ ಎನ್.ಕೆ.ಪ್ರಧಾನ್ ಮಾತನಾಡಿ, ಭಾರತವು ವಿಶ್ವದಲ್ಲಿಯೇ ಅಧಿಕ ಸಂಪರ್ಕ ಸಾರಿಗೆ ಹೊಂದಿರುವ ಎರಡನೇ ರಾಷ್ಟ್ರವಾಗಿದೆ. ಈವರೆಗೆ ನಾವು 407 ಮಿಲಿಯನ್ ಕಿ.ಮೀ.ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದೇವೆ. 2021ರ ವೇಳೆಗೆ ರಸ್ತೆ ಸಂಪರ್ಕ ಇನ್ನಷ್ಟು ಸುಧಾರಣೆ ಹೊಂದಲಿವೆ ಎಂದು ತಿಳಿಸಿದರು.

ರಸ್ತೆಗಳಲ್ಲಿ ಬಳಸುವ ಲೋಹ ಸ್ಲಾಬ್‌ಗಳಿಗೆ ಮಾರ್ಗ ಸೂಚಿಯನ್ನು ಮಾಡಿದ್ದೇವೆ. ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಬಳಸಿ ದೀರ್ಘ ಆಯುಷ್ಯವಿರುವ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿದ್ದೇವೆ. ಸ್ಮಾರ್ಟ್ ಸಿಟಿಗಳ ಪರಿಕಲ್ಪನೆಯಲ್ಲಿ ಮುನ್ನುಗ್ಗುತ್ತಿದ್ದೇವೆ. ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಉತ್ತಮ ರಸ್ತೆಗಳ ನಿರ್ಮಾಣಕ್ಕೆ 16 ನಿಯಮಗಳನ್ನು ನಾವು ಪಾಲಿಸಬೇಕಿದೆ. ನಾವು ಇಂದು ಅನೇಕ ಸವಾಲುಗಳನ್ನು ದಿನನಿತ್ಯ ಎದುರಿಸುತ್ತಿದ್ದೇವೆ ಎಂದರು.

ಜಿಲ್ಲೆ-ಜಿಲ್ಲೆ, ತಾಲೂಕು-ತಾಲೂಕು ಸಂಪರ್ಕ ಕಲ್ಪಿಸುವ ಪ್ರಯತ್ನ ನಡೆಸುತ್ತಿವೆ. ಈ ಸರಕಾರದಲ್ಲಿ 30 ಸಾವಿರ ಕಿ.ಮೀ.ಉತ್ತಮ ಗುಣಮಟ್ಟದ ರಸ್ತೆಗಳು, 10 ಸಾವಿರ ಕಿ.ಮೀ.ರಾಜ್ಯ ಹೆದ್ದಾರಿಗಳು, 21 ಸಾವಿರ ಕಿ.ಮೀ.ಜಿಲ್ಲಾ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ ಜನವಸತಿಗಳಿಗೆ ಒಟ್ಟು ಅನುದಾನದ ಶೇ.21ರಷ್ಟು ವ್ಯಯ ಮಾಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ಒಟ್ಟಿನಲ್ಲಿ ಜನೋಪಯೋಗಿ ಕೆಲಸ ಮಾಡಲು ತಾವು ಬದ್ಧರಿರುವುದಾಗಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಎಂ.ಲಕ್ಷ್ಮಿನಾರಾಯಣ ಸ್ವಾಗತ ಕೋರಿದರು. ಇಂಡಿಯನ್ ರೋಡ್ಸ್ ಕಾಂಗ್ರೆಸ್ ಕಾರ್ಯದರ್ಶಿ ಎನ್.ಕೆ.ನಿರ್ಮಲ್, ಮಾಜಿ ಅಧ್ಯಕ್ಷ ಹೂರ್ವಲ್, ಶಾಸಕ ಡಾ.ಅಶ್ವಥ್‌ನಾರಾಯಣ ಹಾಗೂ ಸಂಸ್ಥೆಯ ಇತರ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಸಾಧಕರನ್ನು ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X