ಐಎಎಸ್ ಅಧಿಕಾರಿ ಕೆ.ಪಿ.ಕೃಷ್ಣನ್ ರಿಗೆ ಐಐಎಂಬಿ ಪ್ರಶಸ್ತಿ
ಬೆಂಗಳೂರು, ನ.2: ಭಾರತ ಸರಕಾರದ ಕೌಶಾಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಕಾರ್ಯದರ್ಶಿ ಕೆ.ಪಿ.ಕೃಷ್ಣನ್ ಬೆಂಗಳೂರಿನ ಇಂಡಿಯನ್ ಇನ್ಸ್‌ಟಿಟ್ಯೂಟ್‌ನ ಮ್ಯಾನೇಜ್‌ಮೆಂಟ್‌ನ ಸಂಸ್ಥಾಪಕರ ದಿನಾಚರಣೆ ಸಮಾರಂಭದಲ್ಲಿ ‘ಡಿಸ್ಟಿಂಗ್ ವಿಶ್ಡ್ ಅಲ್ಯೂಮಿನಿ ಅವಾರ್ಡ್ 2017’ ಪ್ರಶಸ್ತಿ ಪ್ರದಾನ ಮಾಡಲಾಯಿತು.
1983ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದ ಕೆ.ಪಿ.ಕೃಷ್ಣನ್, ಪ್ರಸ್ತುತ ಕೇಂದ್ರ ಸರಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನ ಮಂತ್ರಿಗಳ ಹಣಕಾಸು ಸಲಹಾ ಮಂಡಳಿಯ ಕಾರ್ಯದರ್ಶಿಯಾಗಿ, ಆರ್ಥಿಕ ವ್ಯವಹಾರಗಳ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಮಾರುಕಟ್ಟೆಗೆ ಕಾರ್ಯಾಚರಣೆಗೆ ಸಂಬಂಧಿಸಿದ ನೀತಿ ನಿಯಮಗಳ ವ್ಯಾಪಕ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ಭಾರತದ ಆರ್ಥಿಕ ವಲಯದ ಕುರಿತು ಹಲವಾರು ವರದಿಗಳನ್ನು ತಯಾರಿಸಿದ್ದಾರೆ. ಭೂಮಿ, ನಗರಾಭಿವೃದ್ಧಿ ಮತ್ತು ಹಣಕಾಸು ವಲಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅಧ್ಯಯ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ.
Next Story





