ನ.7ರಿಂದ ‘ಇಂದ್ರ ಧನುಷ್’ ಅಭಿಯಾನ
ಬೆಂಗಳೂರು, ನ.4: ಲಸಿಕೆ ವಂಚಿತ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕೆ ನೀಡಲು ಕೇಂದ್ರ ಮತ್ತು ರಾಜ್ಯ ಸರಕಾರದ ಆಶ್ರಯದಲ್ಲಿ ನ. 7ರಿಂದ ಏಳು ದಿನಗಳ ಕಾಲ 'ಇಂದ್ರ ಧನುಷ್ ಅಭಿಯಾನ'ವನ್ನು ಬಿಬಿಎಂಪಿಯಿಂದ ಹಮ್ಮಿಕೊಳ್ಳಲಾಗಿದೆ.
ನ.7, 8, 10, 13, 14, 15, 17ರಂದು ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ರಮವು ಪಾಲಿಕೆಯ 80 ಯೋಜನಾ ಘಟಕಗಳ ವ್ಯಾಪ್ತಿಯಲ್ಲಿ ಬರುವ ಪಾಲಿಕೆಯ ಎಲ್ಲ ಆಸ್ಪತ್ರೆಗಳಲ್ಲಿ, ಕೊಳಚೆ ಪ್ರದೇಶಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ, ಶಾಲೆಗಳಲ್ಲಿ, ರೈಲ್ವೆ ಆಸ್ಪತ್ರೆಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ.
ಈ ಕಾರ್ಯಕ್ರಮವು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯಲಿದ್ದು, ಸಾರ್ವಜನಿಕರು ಲಸಿಕೆ ವಂಚಿತ ತಮ್ಮ ಮಕ್ಕಳನ್ನು ಹಾಗೂ ಗರ್ಭಿಣಿಯರನ್ನು ಲಸಿಕಾ ಕೇಂದ್ರಗಳಿಗೆ ಕರೆತಂದು, ಲಸಿಕೆ ಹಾಕಿಸಲು ಪಾಲಿಕೆ ಪ್ರಕಟನೆಯಲ್ಲಿ ಮನವಿ ಮಾಡಿದೆ.
Next Story





