Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ...

ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ ಕಾಂಗ್ರೆಸ್ ಬದ್ಧ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ4 Nov 2017 8:40 PM IST
share
ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ ಕಾಂಗ್ರೆಸ್ ಬದ್ಧ: ಡಾ.ಜಿ.ಪರಮೇಶ್ವರ್

ಬೆಂಗಳೂರು, ನ.4: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಅನ್ವಯ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶನಿವಾರ ನಗರದ ಅರಮನೆ ಮೈದಾನದಲ್ಲಿರುವ ಟೆನ್ನಿಸ್ ಪೆವಿಲಿಯನ್‌ನಲ್ಲಿ ಆಯೋಜಿಸಿದ್ದ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಮುಂದಿನ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಪ್ರಮುಖ ಪಾತ್ರವಹಿಸಿ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕರೆ ನೀಡಿದರು.

ರಾಜ್ಯದ 224 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೇವಲ 10 ಮಂದಿ ಮಾತ್ರ ಮಹಿಳಾ ಕೋಟಾದಲ್ಲಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಕೆಯಾಗಿದೆ. ಗೆಲ್ಲುವ ಸಾಮರ್ಥ್ಯ ಇರುವ ಕಡೆ ನೀವು ಅರ್ಜಿ ಹಾಕಿ, ನಾವು ನಿಮಗೆ ಟಿಕೆಟ್ ಕೊಡುತ್ತೇವೆ. ಮಹಿಳಾ ಮೀಸಲಾತಿ ಪರ ಇರುವವರು ನಾವು. ಶೇ.33ರಷ್ಟು ಮೀಸಲಾತಿ ಕೇಳಿದರೂ ಕೊಡುತ್ತೇವೆ. ನೀವು ಟಿಕೆಟ್ ಕೇಳುವ ಮನಸ್ಸು ಮಾಡಬೇಕು ಎಂದು ಸಲಹೆ ನೀಡಿದರು.

ರಾಜ್ಯದ ಮತದಾರರ ಪೈಕಿ ಶೇ.50ರಷ್ಟು ಮಹಿಳೆಯರಿದ್ದಾರೆ. ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಈಗಿನಿಂದಲೇ ಎಚ್ಚೆತ್ತುಕೊಂಡು ಜನರನ್ನು ತಲುಪುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮಹಿಳೆಯರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿವೆ. ಈ ಬಗ್ಗೆ ಎಚ್ಚರವಹಿಸಬೇಕು ತಿಳಿಸಿದರು.

ಮಾಜಿ ಪ್ರಧಾನಿ ಇಂದಿರಾಗಾಂಧಿ ವಿಶ್ವಮಟ್ಟದಲ್ಲಿ ಉಕ್ಕಿನ ಮಹಿಳೆ ಎಂಬ ಬಿರುದನ್ನು ಪಡೆದಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಮಹಿಳೆಯರು ಮತ್ತು ಬಡವರ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಜಾರಿಗೆ ತಂದಿದ್ದರು. ಮಹಿಳೆಯರಿಗೆ ರಾಜಕೀಯ ಶಕ್ತಿ ಕೊಟ್ಟ ನಾಯಕಿಯ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.

ಇಂದಿರಾಗಾಂಧಿ ಜನ್ಮಶತಮಾನೋತ್ಸವದ ಅಂಗವಾಗಿ ನ.19ರಂದು ಮಹಿಳಾ ಕಾಂಗ್ರೆಸ್ ವತಿಯಿಂದ ದೀಪನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಪ್ರತಿಯೊಂದು ಬೂತ್‌ನಲ್ಲಿಯೂ 100 ಮಂದಿ ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ರಾಜ್ಯ ಸರಕಾರ ಮತ್ತು ಇಂದಿರಾಗಾಂಧಿಯ ಸಾಧನೆಯನ್ನು ಜನರಿಗೆ ತಲುಪಿಸಬೇಕು. ಅರಿಶಿನ ಮತ್ತು ಕುಂಕುಮ ನೀಡಿ ಆಶೀರ್ವಾದ ಪಡೆಯಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಸುಷ್ಮಿತಾ ದೇವ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್, ಎಐಸಿಸಿ ಕಾರ್ಯದರ್ಶಿ ಮಧುಯಕ್ಷಿಗೌಡ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್‌ಗುಂಡೂರಾವ್, ಎಸ್.ಆರ್.ಪಾಟೀಲ್, ಮಹಿಳಾ ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ರಾಣಿ ಸತೀಶ್, ವಿಧಾನಪರಿಷತ್ ಸದಸ್ಯೆ ಡಾ.ಜಯಮಾಲಾ, ಜಯಮ್ಮ, ನಟಿ ಭಾವನಾ, ಮಾಜಿ ಮೇಯರ್ ಪದ್ಮಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X