Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಕಲಿ ಮತದಾರರ ಪ್ರಕರಣವನ್ನು ಸಿಬಿಐ...

ನಕಲಿ ಮತದಾರರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು: ಶಾಸಕ ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ4 Nov 2017 10:05 PM IST
share

ಮೈಸೂರು, ನ.4: ತಮ್ಮ ಪ್ರಭಾವ ಬೀರಿ ಕೆ.ಆರ್.ಕ್ಷೇತ್ರದ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂಬ ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಪವನ್ನು ಶಾಸಕ ಎಂ.ಕೆ.ಸೋಮಶೇಖರ್ ಅಲ್ಲಗೆಳೆದು, ನಕಲಿ ಮತದಾರರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಟಿಕೆಟ್ ತಪ್ಪುವ ಭಯದಲ್ಲಿ ಮಾಜಿ ಸಚಿವ ರಾಮದಾಸ್ ಸದಾ ಸುದ್ದಿಯಲ್ಲಿರಲೂ ಇಲ್ಲದ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸ್ವತಃ ಬಿಜೆಪಿಯವರೇ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಿಂದೀಚಿಗೆ ಪಾಲಿಕೆಯ ನಿವೃತ್ತ ಅಧಿಕಾರಿಗಳಾದ ಕೃಷ್ಣ ಮತ್ತು ರಂಗನಾಥ ಅವರು ಸುಮಾರು 20,000 ಸುಳ್ಳು ಮತದಾರರನ್ನು ಸೇರ್ಪಡೆಗೊಳಿಸಿದ್ದು ಈ ಬಗ್ಗೆ ಕೂಲಂಕುಷ ತನಿಖೆಯಾಗಬೇಕೆಂದು ಒತ್ತಾಯಿಸಿದರು.

ಮತಪಟ್ಟಿಯಿಂದ ನಕಲಿ ಮತದಾರರನ್ನು ಕೈಬಿಡುವಂತೆ ಒತ್ತಾಯಿಸಿ ನಾನು ಚುನಾವಣಾ ಆಯುಕ್ತರಾದ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರಕ್ಕೆ ಕ್ರಮ ಕೈಗೊಂಡಿದ್ದಾರೆ. ಶ್ರೀರಾಂಪುರದ ಮನೆ.ನಂ.5ರಲ್ಲಿ ಕೇವಲ ಇಬ್ಬರು ವಾಸಿಸುತ್ತಿದ್ದು ಅಲ್ಲಿ 18 ಮತಗಳು, ಮನೆ ನಂ.6ರಲ್ಲಿ 21 ಮತದಾರರನ್ನು ಸೃಷ್ಟಿಸಿದ್ದಾರೆ ಎಂದರು.

2013 ರಲ್ಲಿ 2 ಲಕ್ಷ 16 ಸಾವಿರ 623 ಮತದಾರರಿದ್ದ ಪಟ್ಟಿಯೂ 2017ರಲ್ಲಿ ಬರೋಬ್ಬರಿ 19,377 ಹೆಚ್ಚಾಗುವ ಮೂಲಕ 2 ಲಕ್ಷ 36 ಸಾವಿರ ಮತದಾರರು ಏರಿಕೆಯಾಗಿದ್ದು,  ಒಟ್ಟು 20 ಸಾವಿರಕ್ಕೂ ಅಧಿಕ ನಕಲಿ ಮತದಾರರು ಪಟ್ಟಿಯೊಳ್ಳಗೆ ಸೇರಿದ್ದರು, ಎಲ್ಲೆಲ್ಲಿ ಖಾಲಿ ನಿವೇಶನವಿದೆಯೋ, ಅಲ್ಲಲ್ಲಿ ನಕಲಿ ಮತದಾರರನ್ನು ಸೇರಿಸಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ತಮಗೆ ಟಿಕೇಟ್ ಸಿಗುವುದಿಲ್ಲ ಎಂಬ ಭಯದಿಂದ ಎಲ್ಲಿ ಜನರು ತಮ್ಮನ್ನು ಮರೆತು ಬಿಡುತ್ತಾರೋ ಎಂಬ ಆತಂಕದಿಂದ  ಈ ರೀತಿ ಸುದ್ದಿಗೋಷ್ಠಿ ನಡೆಸುವ ಮೂಲಕ ರಾಮದಾಸ್ ಅತಿಯಾದ ನಾಟಕವಾಡುತ್ತಿದ್ದಾರೆ ಎಂದು ಆಪಾದಿಸಿದರು.

ಅಸ್ಲಾಂ ಯಾರೆಂಬುದೇ ನನಗೆ ಗೊತ್ತಿಲ್ಲ, ಅಲ್ಪಸಂಖ್ಯಾತರ ಹೆಸರನ್ನು ಸೃಷ್ಟಿಸಿಕೊಂಡು ಬಿಜೆಪಿಯು ಜಾತಿ ರಾಜಕಾರಣ ನಡೆಸುತ್ತಿದೆ. ನನ್ನ ಕ್ಷೇತ್ರದಲ್ಲಿಯೇ 20 ಸಾವಿರ ನಕಲಿ ಮತದಾರರು ಸೃಷ್ಟಿಸಿದ್ದಾರೆ. ಚಾಮುಂಡೇಶ್ವರಿ ಸೇರಿದಂತೆ ಇತರೆ ಕ್ಷೇತ್ರದಲ್ಲಿ ಇನ್ನೇಷ್ಟು ನಕಲಿ ಮತದಾರರಿಬಹುದು ಆತಂಕ ವ್ಯಕ್ತಪಡಿಸಿದರು.

ನಕಲಿ ಮತದಾರರ ವಿರುದ್ಧ ಸಿಬಿಐ ತನಿಖೆಯಾಗಿ ತಪ್ಪಿತಸ್ಥರನ್ನು ಜೈಲಿಗಟ್ಟಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಸುನೀಲ್, ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X