Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಹತ್ತು...

ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಹತ್ತು ದಿನಗಳಲ್ಲಿ ‘ಸಾಚಾರ್’ ಅನುಷ್ಠಾನ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ5 Nov 2017 8:06 PM IST
share
ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಹತ್ತು ದಿನಗಳಲ್ಲಿ ‘ಸಾಚಾರ್’ ಅನುಷ್ಠಾನ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ. 5: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ, ಕೇವಲ ಹತ್ತು ದಿನಗಳಲ್ಲಿ ಮುಸ್ಲಿಮರ ಪ್ರಗತಿಗೆ ಪೂರಕವಾಗಿರುವ ‘ಸಾಚಾರ್ ಸಮಿತಿ ವರದಿ’ ಅನುಷ್ಠಾನಗೊಳಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ರವಿವಾರ ನಗರದ ಹೊರವಲಯದ ಶಾನುಬೋಗನಹಳ್ಳಿಯಲ್ಲಿ ಬೆಂಗಳೂರಿನ ಸಅದಿಯ ವಿದ್ಯಾ ಸಂಸ್ಥೆಯ 15ನೆ ಸಂಭ್ರಮಾಚರಣೆಯ ಸ್ಫಟಿಕ ಮಹೋತ್ಸವ ಸಮಾರಂಭ ಹಾಗೂ ಫಿಝಾ ಸಮೂಹ ಸಂಸ್ಥೆಯ ಸಹಕಾರದೊಂದಿಗೆ ಅನಾಥ ನಿರ್ಗತಿಕ ಮಂದಿರವಾದ ‘ಆಯಿಷಮ್ಮ ಮೆಮೋರಿಯಲ್’ ಕಟ್ಟಡದ ಉದ್ಘಾಟನೆ ಮತ್ತು ಹಾಜಿ ಬಿ.ಎಂ.ಅಹ್ಮದ್ ಬಾವ ಮೆಮೋರಿಯಲ್ ‘ಸಅದಿಯ ಹ್ಯಾಪಿ ಲಿವಿಂಗ್ ರೆನ್’ನ ಶಂಕು ಸ್ಥಾಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದಲಿತ ಸಮುದಾಯಕ್ಕಿಂತ ಮುಸ್ಲಿಮರು ಅತಿ ಹಿಂದುಳಿದಿದ್ದಾರೆ. ಅಲ್ಲದೆ, ಹಲವು ಮಂದಿಗೆ ಇನ್ನೂ ಕನಿಷ್ಠ ಸೌಲಭ್ಯವೇ ದೊರೆತಿಲ್ಲ. ಹೀಗಾಗಿ, ಮುಸ್ಲಿಮರಿಗೆ ಸಾಮಾಜಿಕ, ಶೈಕ್ಷಣಿಕ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿ ಕಲ್ಪಿಸುವ ಜೊತೆಗೆ ಅಭಿವೃದ್ಧಿಗೆ ಪೂರಕವಾಗಿರುವ ‘ಸಾಚಾರ್ ವರದಿ’ಯನ್ನು ಅನುಷ್ಠಾನಗೊಳಿಸಲು ನಾನು ಹಾಗೂ ನಮ್ಮ ಪಕ್ಷ ಬದ್ಧವಾಗಿದೆ ಎಂದು ನುಡಿದರು.

ಕೇಂದ್ರ ಸರಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಿ ದೇಶದ ಮುಸ್ಲಿಮರ ಆರ್ಥಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ ಸ್ಥಿತಿಗತಿ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಮಂಡಿಸುವಂತೆ ಅಧಿಕಾರ ನೀಡಿತ್ತು. ಅದರಂತೆ 2006 ರಲ್ಲಿ ಸಮಿತಿಯು ವರದಿಯನ್ನು ಸರಕಾರಕ್ಕೆ ನೀಡಿದೆ. ಆದರೆ, ಇಲ್ಲಿಯವರೆಗೆ ವರದಿ ಅನುಷ್ಠಾನಗೊಂಡಿಲ್ಲ. ಅಲ್ಲದೆ, ಇದು ಕೇಂದ್ರದಲ್ಲಿಯೇ ಅನುಷ್ಠಾನಗೊಳಿಸಬೇಕಿಲ್ಲ. ಬದಲಿಗೆ ಜೆಡಿಎಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಅನುಷ್ಠಾನ ಮಾಡುವುದಾಗಿ ಕುಮಾರ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮಾತನಾಡಿ, ತಂದೆ-ತಾಯಿ ಹೆಸರಿನಲ್ಲಿ ಬಡವರಿಗೆ ಸಹಾಯ ಮಾಡುವ ಚಿಂತನೆ ಹೆಚ್ಚಾಗಬೇಕು. ನಾವು ಮಾನವ ಕುಲಕ್ಕೆ ನಮ್ಮ ಜೀವನ ಆರ್ಪಿಸಿ ಸಮಾಜ ಸೇವೆ ಮಾಡುವುದನ್ನು ಸಂಕಲ್ಪ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ದೇಶದಲ್ಲಿ ಶಾಂತಿ ಕದಡಿದೆ. ಈ ಬಗ್ಗೆ ನನಗೆ ಹೇಳುವ ಶಕ್ತಿಯೂ ಇದೆ.ಅಲ್ಲದೆ, ನಾನು ಆ ‘ಅಲ್ಲಾಹು ಮತ್ತು ಈಶ್ವರನಿಗೆ ಬಿಟ್ಟರೆ’ ಬೇರೆ ಯಾರಿಗೂ ಹೆದರುವುದಿಲ್ಲ ಎಂದ ಅವರು, ನಾನು ಈ ದೇಶ-ರಾಜ್ಯದ ಆಡಳಿತ ನಡೆಸಿದ್ದೇನೆ. ಈ ಎರಡು ಸಂದರ್ಭದಲ್ಲಿ ಯಾವುದೇ ಧರ್ಮ, ಜಾತಿಗಳ ಸಂಘರ್ಷಕ್ಕೆ ಅವಕಾಶ ನೀಡಲಿಲ್ಲ ಎಂದು ತಿಳಿಸಿದರು.

ಜೆಡಿಎಸ್ ಪ್ರಧಾನ ಕಾರ್ಯದರ್ಶಿ, ಫಿಝಾ ಸಮೂಹ ಸಂಸ್ಥೆಯ ಮಾಲಕ ಬಿ.ಎಂ.ಫಾರೂಕ್ ಮಾತನಾಡಿ, ಇತ್ತೀಚಿಗೆ ಅಲ್ಪಸಂಖ್ಯಾತರ ವಿಷಯಗಳಿಗೆ ಸಂಬಂಧಪಟ್ಟಂತೆ ದೇಶದಲ್ಲಿ ಗೊಂದಲ ಉಂಟಾಗಿದೆ. ಆದರೆ, ಈ ಹಿಂದೆ ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಮುಸ್ಲಿಮರಿಗೆ ಶೇಕಡ 4 ರಷ್ಟು ಮೀಸಲಾತಿ ಕಲ್ಪಿಸಿದ್ದರು. ಇದರಿಂದ ಈ ಸಮುದಾಯ ಸ್ವಲ್ಪ ಮಟ್ಟಿಗೆ ಶೈಕ್ಷಣಿಕವಾಗಿ ಮುಂದಾಗಲು ಕಾರಣವಾಯಿತು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಅದಿಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸೈಯದ್ ಆಟಕೋಯ ತಂಙಳ್ ಕುಂಬೋಳ್, ಪ್ರಧಾನ ಕಾರ್ಯದರ್ಶಿ ಮೌಲಾನ ಎನ್.ಕೆ.ಎಂ.ಶಾಫಿ ಸಅದಿ, ಸಂಸದ ಪುಟ್ಟರಾಜು, ಶಾಸಕ ಬಿ.ಬಿ.ನಿಂಗಯ್ಯ, ಪರಿಷತ್ ಸದಸ್ಯ ಟಿ.ಎ. ಶರವಣ, ಪಾಲಿಕೆ ಸದಸ್ಯ ಇಮ್ರಾನ್ ಪಾಷಾ, ಡಾ.ಅನ್ವರ್ ಶರೀಫ್, ಎಸ್‌ಎಸ್‌ಎಫ್ ಅಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X