ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವ್ಯಕ್ತಿಯ ಬರ್ಬರ ಕೊಲೆ

ಮೈಸೂರು,ನ.5: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಪಾದದ ಬಳಿ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ನಡೆದಿದೆ.
ಕೊಲೆಯಾದವನನ್ನು ಕೆ.ಜಿ.ಕೊಪ್ಪಲಿನ ನಿವಾಸಿ ಪ್ರಭು(30)ಎಂದು ಗುರುತಿಸಲಾಗಿದೆ. ತಡರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ರವಿವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿ ಕಂಡು ಬಂದಿದ್ದು ಕೆ.ಆರ್.ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಎಸಿಪಿ ಧರ್ಮಪ್ಪ, ಇನ್ಸ್ ಪೆಕ್ಟರ್ ಪ್ರಕಾಶ್ , ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





