ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ
ಉಡುಪಿ, ನ.5: ಪ್ರವಾಸೋದ್ಯಮ ಇಲಾಖೆಯ 2017-18ನೇ ಸಾಲಿನ ಸಹಾಯಧನದಲ್ಲಿ ಪ್ರವಾಸಿ ಟ್ಯಾಕ್ಸಿ ನೀಡುವ ಯೋಜನೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಫಲಾನುಭವಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ಪೂರಕ ದಾಖಲೆಗಳೊಂದಿಗೆ ಲಿಖಿತವಾಗಿ ನ.15ರೊಳಗೆ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ನೊೀಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರಣ, ಎ’ ಬ್ಲಾಕ್, 2ನೇ ಮಹಡಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ಕುಂದಾಪುರದ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





