ಬಾಡಿ ಬಿಲ್ಡಿಂಗ್ ಸ್ಪರ್ಧೆ ಮಧ್ಯೆ ಕುಸಿದು ಬಿದ್ದು ಯುವಕ ಮೃತ್ಯು

ಮಂಗಳೂರು, ನ.5: ಬಾಡಿ ಬಿಲ್ಡಿಂಗ್ ಸ್ಪರ್ಧೆ ಮಧ್ಯೆ ಕುಸಿದು ಬಿದ್ದು ಯುವಕ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಇಂದು ರಾತ್ರಿ ನಡೆದಿದೆ.
ಫರಂಗಿಪೇಟೆ ನಿವಾಸಿ ವಿನಯರಾಜ್ (34) ಮೃತ ಬಾಡಿಬಿಲ್ಡರ್ ಎಂದು ಗುರುತಿಸಲಾಗಿದೆ.
ಮಂಗಳೂರಿನ ಡಾನ್ ಬಾಸ್ಕೊ ಹಾಲ್ ನಲ್ಲಿ ನಡೆಯುತ್ತಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಇವರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.
ವಿನಯರಾಜ್ ಮಂಗಳೂರಿನಲ್ಲಿ ಇಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
Next Story





