Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಸ್ತೆಗಳು ಅಭಿವೃದ್ದಿಯಾದರೆ ಆಯಾ...

ರಸ್ತೆಗಳು ಅಭಿವೃದ್ದಿಯಾದರೆ ಆಯಾ ಪ್ರದೇಶವೂ ಅಭಿವೃದ್ದಿ ಕಾಣುತ್ತದೆ: ಯು.ಟಿ.ಖಾದರ್

ಮದ್ಯನಡ್ಕ-ಕುರ್ನಾಡು ರಸ್ತೆ ವಿಸ್ತರಣೆ, ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ6 Nov 2017 6:52 PM IST
share
ರಸ್ತೆಗಳು ಅಭಿವೃದ್ದಿಯಾದರೆ ಆಯಾ ಪ್ರದೇಶವೂ ಅಭಿವೃದ್ದಿ ಕಾಣುತ್ತದೆ: ಯು.ಟಿ.ಖಾದರ್

ಕೊಣಾಜೆ, ನ. 6: ಯಾವ ಪ್ರದೇಶದಲ್ಲಿ ರಸ್ತೆ ಚೆನ್ನಾಗಿರುತ್ತದೋ ಆ ಪ್ರದೇಶ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ. ಆದ್ದರಿಂದ ಗ್ರಾಮೀಣ ಪ್ರದೇಶದ ರಸ್ತೆ ಹಾಗೂ ಇತರ ಮೂಲಭೂತ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರವು ವಿಶೇಷವಾಗಿ ಮುತುವರ್ಜಿ ವಹಿಸಿದೆ ಎಂದು ಸಚಿವ ಯು.ಟಿ.ಖಾದರ್ ಅವರು ಹೇಳಿದರು.

ಕುರ್ನಾಡು ಗ್ರಾಮದ ಮದ್ಯನಡ್ಕ ಮಸೀದಿ, ಬಾರೆಮಾರ್, ಹನ್ನೆರಡುಮುಡಿ, ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನ ಸಂಪರ್ಕ ರಸ್ತೆ ವಿಸ್ತರಣೆ ಹಾಗೂ ಕಾಂಕ್ರೀಟ್ ಕಾಮಗಾರಿ ಶಿಲಾನ್ಯಾಸ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಯಾವುದೇ ಯೋಜನೆಗಳಿದ್ದರೂ 10ರಿಂದ 15 ವರ್ಷಗಳ ಸುದೀರ್ಘ ಬಾಳಿಕೆ ಬರುವಂತದ್ದಾಗಿರಬೇಕು, ಈ ನಿಟ್ಟಿನಲ್ಲಿ ಬೇಡಿಕೆ ಇರುವ ಪ್ರದೇಶಗಳಿಗೆ ರಸ್ತೆ ನಿರ್ಮಿಸಿ ಕಾಂಕ್ರೀಟ್ ಹಾಕುವ ಕಾರ್ಯ ಮಾಡಲಾಗುತ್ತಿದೆ. ಹಿಂದಿನಿಂದಲೂ ಒಬ್ಬೊಬ್ಬರ ಆಯಾ ಸಂದರ್ಭದಲ್ಲಿ ನೀಡಿರುವ ಕೊಡುಗೆಯಿಂದಾಗಿ ಕುರ್ನಾಡು ಗ್ರಾಮ ಜಿಲ್ಲೆಯಲ್ಲೇ ತನ್ನದೇ ಆದ ಇತಿಹಾಸ ಹೊಂದಿದೆ. ಮದ್ಯನಡ್ಕದಿಂದ ಕುರ್ನಾಡುವಿಗೆ ಸಂಪರ್ಕ ರಸ್ತೆಗೆ ಇದ್ದ ಬೇಡಿಕೆಗೆ ಅನುಸಾರವಾಗಿ ಸ್ಥಳೀಯರು ಜಮೀನು ಬಿಟ್ಟುಕೊಟ್ಟಿದ್ದಾರೆ. ತಮ್ಮೂರಿನ ರಸ್ತೆಗಾಗಿ ಕೊಡುಗೆ ನೀಡುವುದು ಮುಖ್ಯ ಎಂದರು.

ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಕಾಜವ ಮಾತನಾಡಿ, ಕುರ್ನಾಡು ಭಾಗಕ್ಕೆ ಕಾಂಗ್ರೆಸ್ ಅತ್ಯಂತ ಹೆಚ್ಚು ಕೊಡುಗೆ ನೀಡಿದ್ದರೂ ಚುನಾವಣೆಯಲ್ಲಿ ಮತಗಳಿಗೆ ಕೊರತೆಯಾಗುತ್ತಿದೆ. ಆದರೂ ಸಚಿವರು ರಾಜಕೀಯ ಮರೆತು ಪ್ರದೇಶಾಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ, ಮುಂಬರುವ ಚುನಾವಣೆಯಲ್ಲಿ ಈ ಭಾಗದಲ್ಲಿ ಯು.ಟಿ.ಖಾದರ್ ಅವರು ಮುನ್ನಡೆ ಸಾದಿಸುವುದರಲ್ಲಿ ಸಂಶಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮದ್ಯನಡ್ಕ ಪ್ರದೇಶಾಭಿವೃದ್ಧಿ ಸಮಿತಿಯಿಂದ ಸಚಿವ ಯು.ಟಿ.ಖಾದರ್, ಪ್ರಶಾಂತ ಕಾಜವ, ಡಿಸಿಸಿ ನೂತನ ಕಾರ್ಯದರ್ಶಿ ಉಮ್ಮರ್ ಪಜೀರ್ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇವದಾಸ ಭಂಡಾರಿ ಅವರನ್ನು ಸನ್ಮಾನಿಸಲಾಯಿತು.

ತಾಲೂಕು ಪಂ. ಸದಸ್ಯ ಅಬ್ದುಲ್ ಜಬ್ಬಾರ್ ಬೋಳಿಯಾರ್, ಕುರ್ನಾಡು ಗ್ರಾ.ಪಂ. ಸದಸ್ಯ ಗೋಪಾಲ ಬಂಗೇರ, ಉದ್ಯಮಿ ಗಣೇಶ್ ನಾಯ್ಕಾ, ಆದಿಮಾಯೆ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ್, ಪ್ರಮುಖರಾದ ಸುಬ್ಬಣ್ಣ ನಾವಡ, ಇಸ್ಮಾಯಿಲ್, ಉಮ್ಮರ್ ಫಾರೂಕ್, ಸೂಫಿಕುಂಞಿ, ಲತೀಫ್, ಇಬ್ರಾಹಿಂ, ಖಾಸಿಂ, ಗುತ್ತಿಗೆದಾರ ಕೆ.ಕೆ.ನಾಸೀರ್ ಇನ್ನಿತರರು ಉಪಸ್ಥಿತರಿದ್ದರು.

ಕುರ್ನಾಡು ಗ್ರಾ.ಪಂ. ಮಾಜಿ ಅಧ್ಯಕ್ಷ ದೇವದಾಸ ಭಂಡಾರಿ ಸ್ವಾಗತಿಸಿದರು. ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X