Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಪುರಂದರದಾಸರ ಪವಾಡ ಒಪ್ಪುವ ಸನಾತನಿಗಳು...

‘ಪುರಂದರದಾಸರ ಪವಾಡ ಒಪ್ಪುವ ಸನಾತನಿಗಳು ಕನಕನನ್ನು ಯಾಕೆ ಒಪ್ಪಲ್ಲ’

ಕನಕದಾಸರ ಜಯಂತೋತ್ಸವದಲ್ಲಿ ಪೇಜಾವರಶ್ರೀ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ6 Nov 2017 7:18 PM IST
share
‘ಪುರಂದರದಾಸರ ಪವಾಡ ಒಪ್ಪುವ ಸನಾತನಿಗಳು ಕನಕನನ್ನು ಯಾಕೆ ಒಪ್ಪಲ್ಲ’

ಉಡುಪಿ, ನ.6: ಕನಕದಾಸರ ಭಕ್ತಿಗೆ ಕೃಷ್ಣ ಪೂರ್ವದಿಂದ ಪಶ್ಚಿಮಕ್ಕೆ ತಿರುಗಿ ರುವುದನ್ನು ನಾನು ಸನ್ಯಾಸ ಪಡೆದಾಗಿನಿಂದ ಪ್ರತಿಪಾದಿಸುತ್ತಾ ಬಂದಿದ್ದೇನೆ. ಆದರೆ ಈ ಬಗ್ಗೆ ಕೆಲವು ಬುದ್ಧಿಜೀವಿಗಳು ಟೀಕಿಸುತ್ತಾರೆ ಮತ್ತು ಕೆಲವು ಸನಾತನಿ ಗಳೂ ಇದನ್ನು ಒಪ್ಪುವುದಿಲ್ಲ. ಪುರಂದರದಾಸರ ಹಾಗೂ ಮಧ್ವಾಚಾರ್ಯರ ಪವಾಡ ಒಪ್ಪುವ ಸನಾತನಿಗಳು, ಕನಕದಾಸರ ಪವಾಡ ಯಾಕೆ ಒಪ್ಪುವುದಿಲ್ಲ ಎಂದು ಪರ್ಯಾಯ ಪೇಜಾವರ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ, ಪರ್ಯಾಯ ಪೇಜಾವರ ಮಠ ಶ್ರೀಕೃಷ್ಣ ಮಠ ಹಾಗೂ ಕನಕ ಸದ್ಬಾವನಾ ಜ್ಯೋತಿ ರಥಯಾತ್ರೆ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಇಂದು ರಾಜಾಂಗಣದಲ್ಲಿ ಆಯೋಜಿಸ ಲಾದ ಜಗದ್ಗುರು ಕನಕದಾಸರ 530ನೆ ಜಯಂತೋತ್ಸವವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ವಾದಿರಾಜ ಆಚಾರ್ಯರು ಆ ಕಾಲದಲ್ಲಿ ರಚಿಸಿದ ಕನಕದಾಸರ ಕುರಿತ ಹಾಡುಗಳಲ್ಲಿ ಶ್ರೀಕೃಷ್ಣ ಕನಕದಾಸರ ಭಕ್ತಿಗೆ ಒಲಿದು ತಿರುಗಿದ್ದಾನೆ ಎಂಬ ವಿಚಾರ ವನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಆದುದರಿಂದ ಈ ಪವಾಡ ನಡೆದಿರುವುದು ಸತ್ಯ.ಹೀಗಾಗಿ ಈ ವಿವಾದಕ್ಕೆ ಶಾಶ್ವತ ತೆರೆ ಎಳೆಯಬೇಕು ಎಂದು ಸ್ವಾಮೀಜಿ ನುಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕನಕ ದಾಸರ ಜನ್ಮ ಭೂಮಿ ಕಾಗಿನೆಲೆಯಾದರೆ, ಕರ್ಮ ಭೂಮಿ ಉಡುಪಿ. ದೇವರು ಒಲಿಯುವುದು ನಿರ್ಮಲ ಮನಸ್ಸಿನ ಭಕ್ತಿಗೆ ಹೊರತು ಹಣ ಸಂಪತ್ತಿಗಲ್ಲ. ಇದಕ್ಕೆ ಕನಕದಾಸರೇ ನಮ್ಮ ಮುಂದೆ ಇರುವ ದೊಡ್ಡ ಉದಾರಣೆ ಎಂದರು.

ಮಂಗಳೂರು ವಿವಿ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ.ಬಿ.ಶಿವ ರಾಮ ಶೆಟ್ಟಿ ವಿಶೇಷ ಉಪನ್ಯಾಸ ನೀಡಿದರು. ಶ್ರೀಉಮಾಶಂಕರ ಸ್ವಾಮೀಜಿ ಬೆಂಗಳೂರು, ರಥಯಾತ್ರೆ ಸಮಿತಿಯ ರಾಜ್ಯಾಧ್ಯಕ್ಷ ಓಂ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಪ್ರಭಾವತಿ, ಸಾಹಿತಿ, ಚೊಕ್ಕನಹಳ್ಳಿ ಮಹೇಶ್, ಅಲೆವೂರು ಗ್ರಾಪಂ ಅಧ್ಯಕ್ಷ ಶ್ರೀಕಾಂತ್ ನಾಯಕ್, ನಗರಸಭೆ ಸದಸ್ಯ ಯುವರಾಜ್, ಹಾಲುಮತ ಯುವ ವೇದಿಕೆಯ ಗೌರವಾಧ್ಯಕ್ಷ ಸಿದ್ಧರಾಜು ಕೆ.ಎಸ್., ಸಮಾಜ ಸೇವಕ ನಿತ್ಯಾನಂದ ಒಳಕಾಡು, ವಿಜಯ ಕುಮಾರ್ ಹಾಸಂಗಿ ಉಪಸ್ಥಿತರಿದ್ದರು.

ಕನಕದಾಸ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಮೇಟಿ ಮುದಿಯಪ್ಪ ಸ್ವಾಗತಿಸಿದರು. ಅಧ್ಯಕ್ಷ ಹನುಮಂತ ಡೊಳ್ಳಿನ ವಂದಿಸಿದರು. ಬೀರಪ್ಪ ಹುನಿ ಚಾಳ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X