Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೋಕಾಯುಕ್ತದಲ್ಲಿ ತನಿಖೆಯಾಗದೆ ಬಾಕಿ...

ಲೋಕಾಯುಕ್ತದಲ್ಲಿ ತನಿಖೆಯಾಗದೆ ಬಾಕಿ ಉಳಿದಿವೆ 3,183 ಪ್ರಕರಣಗಳು

ವಾರ್ತಾಭಾರತಿವಾರ್ತಾಭಾರತಿ6 Nov 2017 10:06 PM IST
share

ಬೆಂಗಳೂರು, ನ.6: ಲೋಕಾಯುಕ್ತ ಸಂಸ್ಥೆಯಲ್ಲಿದ್ದ ಪೊಲೀಸರಿಗೆ ಎಫ್‌ಐಆರ್ ದಾಖಲಿಸಿಕೊಳ್ಳುವ ಅಧಿಕಾರವನ್ನು ಹಿಂಪಡೆದಿರುವ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಪ್ರಕರಣಗಳ ತನಿಖೆಗೆ ಗ್ರಹಣ ಬಡಿದಿದೆ.

ಮತ್ತೊಂದೆಡೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸದೇ ವಿಳಂಬ ಮಾಡುತ್ತಿರುವುದೇಕೆ ಎಂದು ವಿಧಾನಮಂಡಲ ಭರವಸೆಗಳ ಸಮಿತಿ ಲೋಕಾಯುಕ್ತ ಸಂಸ್ಥೆಯನ್ನೇ ಪ್ರಶ್ನೆ ಮಾಡಿದೆ.

ಮಂಜೂರಾಗಿರುವ 24 ಎಸ್ಪಿ ಹುದ್ದೆಗಳ ಪೈಕಿ 17 ಹುದ್ದೆಗಳು ಖಾಲಿ ಇವೆ. ಬೆಂಗಳೂರು ಕೇಂದ್ರ ಕಚೇರಿ, ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಒಟ್ಟು ಆರು ಎಸ್ಪಿ ಹುದ್ದೆಗಳಲ್ಲಿ ನಾಲ್ಕು ಖಾಲಿ ಇವೆ. ಮೈಸೂರು, ಯಾದಗಿರಿ, ಹಾಸನ, ಬೆಳಗಾವಿ, ಧಾರವಾಡ ಬಿಟ್ಟರೆ ಉಳಿದ ಯಾವ ಜಿಲ್ಲೆಗಳಿಗೂ ಪೂರ್ಣ ಪ್ರಮಾಣದ ಎಸ್ಪಿಗಳಿಲ್ಲ. ಇರುವ ಏಳು ಅಧಿಕಾರಿಗಳಿಗೆ ಐದರಿಂದ ಏಳು ಜಿಲ್ಲೆಗಳನ್ನು ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಲೋಕಾಯುಕ್ತದಲ್ಲಿ ಒಟ್ಟು 3,185 ಪ್ರಕರಣಗಳ ತನಿಖೆ ಬಾಕಿ ಇವೆ. ಲೋಕಾಯುಕ್ತದಲ್ಲಿ ಇದ್ದ ಎಸ್ಪಿಗಳನ್ನು ವರ್ಗಾವಣೆ ಮಾಡಿದ ಸರಕಾರ, ಆ ಜಾಗಕ್ಕೆ ಬೇರೆ ಅಧಿಕಾರಿಗಳನ್ನು ನೇಮಕ ಮಾಡುತ್ತಿಲ್ಲ. ಐಜಿಪಿಯಾಗಿದ್ದ ಪ್ರಣವ್ ಮೊಹಂತಿ ಕೇಂದ್ರ ಸೇವೆಗೆ ವರ್ಗಾವಣೆಯಾದ ಬಳಿಕ ಆ ಹುದ್ದೆಯೂ ಖಾಲಿ ಇದೆ.
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಯಾದ ಬಳಿಕ ಲೋಕಾಯುಕ್ತಕ್ಕೆ ಎಫ್‌ಐಆರ್ ದಾಖಲಿಸುವ ಅಧಿಕಾರ ಇಲ್ಲ. ಹೀಗಾಗಿ, ಪೊಲೀಸ್ ಅಧಿಕಾರಿಗಳ ಅಗತ್ಯತೆ ಇಲ್ಲ ಎಂದು ಸರಕಾರ ಭಾವಿಸಿದಂತಿದೆ. ಆದರೆ, ಹಳೇ ಪ್ರಕರಣಗಳು ಮತ್ತು ಸರಕಾರ ವಹಿಸುವ ತನಿಖೆ ಪೂರ್ಣಗೊಳಿಸುವ ಜವಾಬ್ದಾರಿ ಲೋಕಾಯುಕ್ತ ಪೊಲೀಸರಿಗೆ ಇದೆ ಎಂದು ಮೂಲಗಳು ಹೇಳಿವೆ.

ಪ್ರಕರಣಗಳು ಬಾಕಿ: 2007-2012ರ ಅವಧಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಕೋಟ್ಯಂತರ ರೂ.ಅವ್ಯವಹಾರ ನಡೆದಿದೆ ಎಂಬ ಮಹಾ ಲೆಕ್ಕಪಾಲರ(ಸಿಎಜಿ) ವರದಿ ಆಧರಿಸಿ ತನಿಖೆ ನಡೆಸುವಂತೆ 2014ರಲ್ಲಿ ಸರಕಾರ ಲೋಕಾಯುಕ್ತಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಒಟ್ಟು 6,022 ಪಂಚಾಯಿತಿಗಳಿವೆ. ಒಂದೊಂದು ಪಂಚಾಯಿತಿಯಲ್ಲೇ ಸುಮಾರು 1,500 ಪ್ರಕರಣಗಳಿವೆ. ಅಗತ್ಯಕ್ಕೆ ತಕ್ಕಷ್ಟು ಸಿಬ್ಬಂದಿ ಇಲ್ಲದಿದ್ದರೆ ತನಿಖೆ ಪೂರ್ಣಗೊಳಿಸುವುದಾದರೂ ಹೇಗೆ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರಕಾರಿ ಅಭಿಯೋಜಕರ ನೇಮಕ ಅವ್ಯವಹಾರ ಪ್ರಕರಣ, ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ ನೇಮಕ ಮತ್ತು ಔಷಧಿ ಖರೀದಿ ಹಗರಣ, ಐಎಎಸ್ ಅಧಿಕಾರಿ ಕಪಿಲ್ ಮೋಹನ್ ವಿರುದ್ಧದ ಪ್ರಕರಣ ಸೇರಿ ಪ್ರಮುಖ ಪ್ರಕರಣಗಳ ತನಿಖೆಯನ್ನು ಲೋಕಾಯುಕ್ತ ಪೊಲೀಸರು ನಡೆಸುತ್ತಿದ್ದಾರೆ. ಹೀಗಾಗಿ, ಖಾಲಿ ಇರುವ ಪೊಲೀಸ್ ಅಧಿಕಾರಿಗಳ ಹುದ್ದೆ ಭರ್ತಿಗೆ ಸರಕಾರ ಪದೇ ಪದೇ ಪತ್ರ ಬರೆಯಲಾಗುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X