ಟಿಪ್ಪುಜಯಂತಿ: ನ.8ರಿಂದ ನಿಷೇಧಾಜ್ಞೆ ಜಾರಿ
ಉಡುಪಿ, ನ.6: ಈ ತಿಂಗಳ 10ರಂದು ನಡೆಯುವ ಟಿಪ್ಪುಜಯಂತಿಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ನ.8ರಂದು ಬೆಳಗ್ಗೆ 6 ಗಂಟೆಯಿಂದ ನ.11ರ ಬೆಳಗ್ಗೆ 6ಗಂಟೆಯವರೆಗೆ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್ ಆದೇಶ ಹೊರಡಿಸಿದ್ದಾರೆ.
ಟಿಪ್ಪುಜಯಂತಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಗಳಿರುವುದರಿಂದ ಜಿಲ್ಲೆಯಲ್ಲಿ ಕೆಲವು ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಸರಕಾರಿ ಕಾರ್ಯಕ್ರಮಗಳು ನಡೆಯುವ ಸ್ಥಳಗಳನ್ನು ಹೊರತುಪಡಿಸಿ ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





