Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾತಿ ವ್ಯವಸ್ಥೆ ಹೋಗಲಾಡಿಸುವುದು ಕನಕದಾಸರ...

ಜಾತಿ ವ್ಯವಸ್ಥೆ ಹೋಗಲಾಡಿಸುವುದು ಕನಕದಾಸರ ಚಿಂತನೆಯಾಗಿತ್ತು: ವರ್ತೂರ್ ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ6 Nov 2017 10:29 PM IST
share
ಜಾತಿ ವ್ಯವಸ್ಥೆ ಹೋಗಲಾಡಿಸುವುದು ಕನಕದಾಸರ ಚಿಂತನೆಯಾಗಿತ್ತು: ವರ್ತೂರ್ ಪ್ರಕಾಶ್

ಕೋಲಾರ, ನ.6: ಕನಕದಾಸರ ಮಹಾನ್ ಚಿಂತನೆ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸುವುದು ಹಾಗೂ ಸಮಾಜದಲ್ಲಿ ಸಮಾನತೆಯನ್ನು ತರುವುದೇ ಆಗಿತ್ತು ಎಂದು ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ತಿಳಿಸಿದ್ದಾರೆ.

ಇಂದು ನಗರದ ಕನಕ ಮಂದಿರದ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕುರುಬರ ಸಂಘ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ  ಕನಕದಾಸರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರು ಹನ್ನೆರಡನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿ ಜಗಜ್ಯೋತಿಯಾದರು. ಅದೇ ರೀತಿ ಕನಕದಾಸರು ಹದಿನೈದನೇ ಶತಮಾನದಲ್ಲಿ ಬಸವಣ್ಣನವರ ಚಿಂತನೆಗಳನ್ನು ಮುಂದುವರೆಸಿದ ಮಹಾನ್ ವ್ಯಕ್ತಿ. ನಂತರ ಇದೇ ಹಾದಿಯಲ್ಲಿ ಸಾಗಿದ ಮತ್ತೊಬ್ಬ ಮಹಾನ್ ಪುರುಷ ಎಂದರೆ ಸಂವಿಧಾನ ರಚನೆಕಾರರಾದ ಡಾ.ಬಿ.ಆರ್.ಅಂಬೇಡ್ಕರ್ ಎಂದು ಅಭಿಪ್ರಾಯಪಟ್ಟರು.

ಹತ್ತು ವರ್ಷಗಳ ನಂತರ ಜಿಲ್ಲೆಗೆ ಉತ್ತಮ ಮಳೆಯಾಗಿದೆ. ಇದರಿಂದ ಜಿಲ್ಲೆಯ ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಕೋಲಾರಮ್ಮನ ಕೆರೆ ಹಾಗೂ ಅಮ್ಮೇರಹಳ್ಳಿ ಕೆರೆಯಿಂದ 50 ಲಕ್ಷ ರೂ ವೆಚ್ಚದಲ್ಲಿ ನಗರದ ಎಲ್ಲಾ ವಾರ್ಡ್‍ಗಳಿಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಕೋಲಾರ ಜಿಲ್ಲಾಧಿಕಾರಿ ಜಿ.ಸತ್ಯವತಿ ಅವರು ಮಾತನಾಡಿ, ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿದ ಕನಕದಾಸರು ದೇವರ ಅನುಗ್ರಹ ಪಡೆದು ಮನುಕುಲದ ಆರಾಧ್ಯ ದೇವರಾದರು. ಕನಕದಾಸರ ಜೀವನ ಆದರ್ಶಗಳು ಹಾಗೂ ಚಿಂತನೆಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೋಲಾರ ನಗರಸಭೆ ಅಧ್ಯಕ್ಷೆ ಮಹಾಲಕ್ಷ್ಮಿ ಪ್ರಸಾದ್‍ಬಾಬು, ತಾಲೂಕು ಪಂಚಾಯತ್ ಅಧ್ಯಕ್ಷ ಸೂಲೂರು ಎಂ.ಆಂಜಿನಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಆರ್.ವೆಂಕಟೇಶ್, ಅರುಣ್ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸಪೆಟ್, ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಶುಭಾ ಕಲ್ಯಾಣ್ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X