ಇಬ್ಬರ ಮೃತದೇಹ ಪತ್ತೆ: ವಾರಸುದಾರರಲ್ಲಿ ಮನವಿ
ಮಂಗಳೂರು, ನ. 6: ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳ ಮೃತದೇಹ ಪತ್ತೆಯಾಗಿದ್ದು, ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ದಕ್ಷಿಣ ಪೊಲೀಸ್ ಠಾಣಾ ಸರಹದ್ದಿನಲ್ಲಿ ನ. 5ರಂದು ಸುಮಾರು 65 ಮತ್ತು 55 ವರ್ಷ ಪ್ರಾಯದ ಇಬ್ಬರ ಮೃತದೇಹ ಪತ್ತೆಯಾಗಿವೆ. ಮೃತರ ಬಗ್ಗೆ ಯಾವುದೇ ವಿವರಗಳು ಲಭ್ಯವಾಗಿಲ್ಲ. ವಾರಸುದಾರರಿದ್ದಲ್ಲಿ ದಕ್ಷಿಣ ಪೊಲೀಸ್ ಠಾಣೆ 0824-2220518 ಅಥವಾ ಸಿಟಿ ಕಂಟ್ರೋಲ್ ರೂಂ 0824-2220800 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





