ನ.9ರಂದು ಅಭ್ಯರ್ಥಿಗಳ ಪಟ್ಟಿ ಅಂತಿಮ: ಈಶ್ವರಪ್ಪ
ವಿಧಾನಪರಿಷತ್ ಚುನಾವಣೆ
ಶಿವಮೊಗ್ಗ, ನ.6: ನೈಋತ್ಯ ಪದವೀಧರ ಕ್ಷೇತ್ರ ಸೇರಿದಂತೆ ಪದವೀಧರ ಹಾಗೂ ಶಿಕ್ಷಕರ ಆರು ಕ್ಷೇತ್ರಗಳಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾ
ವಣೆಗೆ ನ.9 ರಂದು ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನ.9ರಂದು ಮಂಗಳೂರಿನಲ್ಲಿ ಪಕ್ಷದ ಮುಖಂಡರ ಸಭೆ ನಡೆಯಲಿದೆ. ಎಲ್ಲ ಕ್ಷೇತ್ರಗಳಿಗೂ ಸಮರ್ಥ ಅ್ಯರ್ಥಿಗಳನ್ನು ಅಖಾಡಕ್ಕಿಳಿಸಲಾಗುವುದು. ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯ ಸಾಧಿಸಲಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮೊನ್ನೆ ಆರಂಭಗೊಂಡ ಪರಿವರ್ತನಾ ಯಾತ್ರೆ ಅತ್ಯಂತ ಯಶಸ್ಸಿನಿಂದ ಸಾಗುತ್ತಿದೆ. ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯಾತ್ರೆ ಆರಂಭದ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ದರು. ಬಿಸಿಲು ಹೆಚ್ಚಿದ್ದ ಕಾರಣದಿಂದ ಕೆಲವರು ಮರದ ನೆರಳಿನಲ್ಲಿ ಕುಳಿತುಕೊಂಡಿದ್ದರು. ಆದರೆ ಸಮಾರಂಭಕ್ಕೆ ಜನರೇ ಬಂದಿಲ್ಲವೆಂದು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ಮಾತಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಕೆ.ಈ. ಕಾಂತೇಶ್ ಮೊದಲಾದವರಿದ್ದರು.







