Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೂರು ತಿಂಗಳೊಳಗೆ ಎಲ್ಲ ಅಕ್ರಮ ಕಟ್ಟಡಗಳ...

ಮೂರು ತಿಂಗಳೊಳಗೆ ಎಲ್ಲ ಅಕ್ರಮ ಕಟ್ಟಡಗಳ ಸಕ್ರಮ: ಸಿಎಂ ಸಿದ್ದರಾಮಯ್ಯ

ಅಕ್ರಮ-ಸಕ್ರಮ

ವಾರ್ತಾಭಾರತಿವಾರ್ತಾಭಾರತಿ7 Nov 2017 8:30 PM IST
share
ಮೂರು ತಿಂಗಳೊಳಗೆ ಎಲ್ಲ ಅಕ್ರಮ ಕಟ್ಟಡಗಳ ಸಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ. 7: ‘ಇದು ಚುನಾವಣೆಯ ವರ್ಷ, ಮುಂದಿನ ಎಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಹೀಗಾಗಿ ಜಾರಿಯಲ್ಲಿರುವ ಸರಕಾರದ ಕಾರ್ಯಕ್ರಮಗಳನ್ನು ಪ್ರಸಕ್ತ ಸಾಲಿನ ಹಣಕಾಸು ವರ್ಷ ಪೂರ್ಣಗೊಳಿಸಲು ವಿಶೇಷ ಕಾಳಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ರಮ- ಸಕ್ರಮ ಯೋಜನೆಯಡಿ ಭೂ ಕಂದಾಯ ಕಾಯಿದೆಯನ್ವಯ ಗ್ರಾಮೀಣ ಪ್ರದೇಶದಲ್ಲಿ 94‘ಸಿ’ ಹಾಗೂ ನಗರ ಪ್ರದೇಶದಲ್ಲಿ 94‘ಸಿ-ಸಿ’ಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಮೂರು ತಿಂಗಳೊಳಗೆ ಎಲ್ಲ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಅದೇ ರೀತಿ ಅರಣ್ಯ ಹಕ್ಕು ಸಮಿತಿ ಶಿಫಾರಸಿನನ್ವಯ ಅರಣ್ಯವಾಸಿಗಳಿಗೂ ಸ್ವಾಧೀನ ಪತ್ರ ಕೊಡುವ ಕ್ರಮ ವೇಗವಾಗಿ ಆಗಬೇಕು. ಪ್ರಸಕ್ತ ಆರ್ಥಿಕ ವರ್ಷದ 7 ತಿಂಗಳು ಕಳೆದು ಇನ್ನೂ ಐದು ತಿಂಗಳು ಉಳಿದಿದೆ. ಚುನಾವಣೆಗಳು ಸಮೀಪಿಸುತ್ತಿದ್ದರೂ, ಈ ಆರ್ಥಿಕ ವರ್ಷ ಪೂರ್ಣವಾಗಿ ಕಾರ್ಯ ನಿರ್ವಹಿಸಬಹುದು. ಇನ್ನೂ ಬಾಕಿ ಇರುವ ಕಾರ್ಯಗಳನ್ನು ದಕ್ಷತೆ, ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿ ಎಂದು ತಾಕೀತು ಮಾಡಿದರು.

ಸರಕಾರ ನಿರೀಕ್ಷಿಸಿದ ಮಟ್ಟದಲ್ಲಿ ಕಾರ್ಯಗಳು ಜಾರಿ ಆಗಬೇಕು. ನಿವೇಶನ-ರಹಿತ ಹಾಗೂ ವಸತಿ-ರಹಿತ ಎಸ್ಸಿ-ಎಸ್ಟಿ ವರ್ಗದವರಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದಲ್ಲಿ ಮನೆ, ನಿವೇಶನ ಕೊಡುವುದು ಎಂದು ಈಗಾಗಲೇ ಘೋಷಿಸಿದ್ದೇವೆ. ಜಿಲ್ಲಾ, ತಾಲೂಕು, ಪಂಚಾಯತ್ ಮಟ್ಟದಲ್ಲಿ ನಿವೇಶನ ಹಂಚಿಕೆಗೆ ಲಭ್ಯವಿರುವ ಭೂಮಿ ಗುರುತಿಸದಿದ್ದರೆ ಸರಕಾರದ ಸದುದ್ದೇಶ ಸಾಕಾರಗೊಳಿಸಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಈ ಕೂಡಲೇ ಕಾರ್ಯೋನ್ಮುಖರಾಗಿ ಎಂದು ಮುಖ್ಯಮಂತ್ರಿ ಆದೇಶಿಸಿದರು.

ಒತ್ತುವರಿ ತೆರವು: ಎ.ಟಿ.ರಾಮಸ್ವಾಮಿ ವರದಿಯಲ್ಲಿ 34,111ಎಕರೆ ಸರಕಾರಿ ಭೂ ಒತ್ತುವರಿಯಾಗಿದೆ. ಆ ಪೈಕಿ 7,781ಎಕರೆ ಭೂ ಒತ್ತುವರಿ ಸಾರ್ವಜನಿಕ ಉದ್ದೇಶಿಗಳಿಗೆ ಆಗಿದೆ ಎಂದೂ ವಿವರ ನೀಡಿದ್ದಾರೆ. ಅಂತೆಯೇ, ಒತ್ತುವರಿ ಆಗಿರುವ 11,960 ಎಕರೆ ಸರಕಾರಿ ಜಮೀನಿನಲ್ಲಿ 11,660 ಎಕರೆ ಸರಕಾರಿ ಭೂಮಿಯನ್ನು ಬೆಂ.ನಗರ ಜಿಲ್ಲಾಧಿಕಾರಿಗಳು ತೆರವುಗೊಳಿಸಿದ್ದಾರೆ. ಅಲ್ಲದೆ, ವರದಿಯಲ್ಲಿ ನಮೂದಿತವಾಗದ 6ಸಾವಿರ ಎಕರೆ ಭೂಮಿಯನ್ನೂ ಬೆಂ.ನಗರ ಜಿಲ್ಲಾಧಿಕಾರಿಗಳು ತೆರವುಗೊಳಿಸಿದ್ದಾರೆ. ರಾಜ್ಯದ ಇತರೆಡೆಗಳಲ್ಲಿಯೂ ಒತ್ತುವರಿಯಾಗಿರುವ ಸರಕಾರಿ ಜಮೀನುಗಳನ್ನು ಆದ್ಯತೆಯ ಮೇರೆಗೆ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ. ಇದರಿಂದ ರೈಲ್ವೆ, ರಸ್ತೆ, ಶಾಲಾ ಕಟ್ಟಡ ಹಾಗೂ ವಸತಿ ನಿಲಯಗಳಂತಹ ಸಾರ್ವಜನಿಕ ಹಿತದೃಷ್ಟಿ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲವಾಗಲಿದೆ ಎಂದರು.

ಸರಕಾರಿ ಭೂಮಿ ಮಂಜೂರಾಗಿರುವ ಸಂಘ-ಸಂಸ್ಥೆಗಳ ಬಗ್ಗೆಯೂ ನಿಗಾ ವಹಿಸಿ, ಸರಕಾರದಿಂದ ಮಂಜೂರಾದ ಜಮೀನು ಅದೇ ಉದ್ದೇಶಕ್ಕೆ ಬಳಸಲಾಗಿದೆಯೇ? ಇಲ್ಲವೇ? ಎಂಬುದನ್ನು ಪರಿಶೀಲಿಸಿ. ಜಮೀನು ಹಾಗೂ ವಕ್ಫ್ ಆಸ್ತಿಗಳ ಒತ್ತುವರಿ, ರಸ್ತೆಗಳು ಹಾಗೂ ಕೆರೆ-ಕುಂಟೆಗಳ ಅತಿಕ್ರಮಣದಂತಹ ಪ್ರಕರಣಗಳತ್ತ ಗಮನ ಹರಿಸಿ ಜಿಲ್ಲಾಧಿಕಾರಿಗಳು ಸರಕಾರದ ಆಸ್ತಿ ರಕ್ಷಣೆಯತ್ತ ಕ್ರಮ ಕೈಗೊಳ್ಳಬೇಕು ಎಂದ ಅವರು, ಆರು ಸಾವಿರ ಬಾಪೂಜಿ ಸೇವಾ ಕೇಂದ್ರ ನಿರ್ಮಿಸಲು ಗುರಿ ಹಾಕಿಕೊಂಡಿದ್ದು, 5141 ಬಾಪೂಜಿ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ನೂರಕ್ಕೂ ಹೆಚ್ಚು ಸೇವೆಗಳ ಒದಗಿಸುತ್ತಿರುವ ಈ ಕೇಂದ್ರಗಳು ಜನರಿಗೆ, ರೈತರಿಗೆ, ಉಪಯುಕ್ತ. ಉಳಿದ 859 ಸೇವಾ ಕೇಂದ್ರಗಳನ್ನು ಮುಂದಿನ 2 ತಿಂಗಳೊಳಗೆ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ನಗರದಲ್ಲಿ ಒಂದು ಲಕ್ಷ ಮನೆ ನಿರ್ಮಿಸಲು ಗುರಿ ಇದೆ. ಜಿಲ್ಲಾ ಮಟ್ಟದಲ್ಲಿ ಒಟ್ಟಾರೆ 6 ಲಕ್ಷ ಮನೆಗಳನ್ನು ನಿರ್ಮಿಸಲು ಈ ವರ್ಷ ಗುರಿ ಹೊಂದಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ನಿವೇಶನ ದೊರಕಿಸಿಕೊಡುವ ಜವಾಬ್ದಾರಿ ತಮ್ಮ ಮೇಲಿದೆ. ರಾಜ್ಯದಲ್ಲಿ 15ಲಕ್ಷ ಮನೆಗಳನ್ನು 5 ವರ್ಷಗಳಲ್ಲಿ ನಿರ್ಮಿಸಲು ಗುರಿ ಹೊಂದಿದ್ದು, ಇದೀಗ 12ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಇನ್ನೂ 3ಲಕ್ಷ ಮನೆಗಳನ್ನು ಈ ವರ್ಷಾಂತ್ಯದೊಳಗೆ ನಿರ್ಮಿಸಬೇಕು. ಈ ಕಾರ್ಯಕ್ಕೆ ಮತ್ತಷ್ಟು ವೇಗ ದೊರೆಯಬೇಕಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X