ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ
ಉಡುಪಿ, ನ.7: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಅಭಿಯೋಜನಾ ಇಲಾಖೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಮತ್ತು ಸೇವೆಗಾಗಿ ಸಂಪರ್ಕ ಕಾನೂನು ಮಾಹಿತಿ ಜಾಗೃತಿ ಆಂದೋಲನ ನ.9ರಿಂದ 18ರವರೆಗೆ ನಡೆಯಲಿದೆ.
ನ.9ರಂದು ಬೆಳಗ್ಗೆ 9:30ಕ್ಕೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಾಥಾ ವನ್ನುಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಂಜೀವ ಪಾಟೀಲ್ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10:15ಕ್ಕೆ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಸಭಾಭವನ ದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟೇಶ ನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಎಸ್ಪಿ ಡಾ. ಸಂಜೀವ ಪಾಟೀಲ್, ಅಪರ ಜಿಲ್ಲಾಧಿಕಾರಿ ಅನುರಾಧ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಉಡುಪಿ ಜಿಲ್ಲಾ ಸರಕಾರಿ ಅಭಿಯೋಜಕ ಶಾಂತಿ ಬಾ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





