ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಗುಂಡುಗಳ ಪತ್ತೆ
ಬೆಂಗಳೂರು, ನ. 8: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿ ಎರಡು ಸಜೀವ ಗುಂಡುಗಳ ಪತ್ತೆಯಾದ ಹಿನ್ನೆಲೆಯಲ್ಲಿ ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಈ ಪ್ರಕರಣ ಸಂಬಂಧ ಪುಣೆ ಮೂಲಕದ ಬಾದೆ ದಾನೇಶ್ವರ್ ಎಂಬವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದಾರೆ. ಬುಧವಾರ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಪುಣೆಗೆ ಪ್ರಯಾಣಿಸುತ್ತಿದ್ದ ದಾನೇಶ್ವರ್ ಬಳಿ ಇದ್ದ ಬ್ಯಾಗ್‌ನಲ್ಲಿ 22 ನಂಬರ್‌ನ ಎರಡು ಸಜೀವ ಗುಂಡುಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಸಿಐಎಸ್‌ಎಫ್ ಸಿಬ್ಬಂದಿ ತಪಾಸಣೆ ಬಳಿಕ ಸಜೀವ ಗುಂಡುಗಳು ಹಾಗೂ ಕಾಟ್ರೀಜ್ ವಶಪಡಿಸಿಕೊಳ್ಳಲಾಗಿದೆ. ನ.2ರಂದು ಪ್ರಕರಣ ಪತ್ತೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.
Next Story





