Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೋಟು ನಿಷೇಧಕ್ಕೆ ಒಂದು ವರ್ಷ: ಎಡ...

ನೋಟು ನಿಷೇಧಕ್ಕೆ ಒಂದು ವರ್ಷ: ಎಡ ಪಕ್ಷಗಳಿಂದ ಕರಾಳ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ8 Nov 2017 8:11 PM IST
share
ನೋಟು ನಿಷೇಧಕ್ಕೆ ಒಂದು ವರ್ಷ: ಎಡ ಪಕ್ಷಗಳಿಂದ ಕರಾಳ ದಿನಾಚರಣೆ

ಬೆಂಗಳೂರು, ನ.8: ಪ್ರಧಾನಿ ನರೇಂದ್ರ ಮೋದಿ 500, 1000 ಮುಖಬೆಲೆಯ ಗರಿಷ್ಠ ಪ್ರಮಾಣದ ನೋಟುಗಳ ಅಮಾನ್ಯೀಕರಣಗೊಳಿಸಿ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಖಂಡಿಸಿ ಸಿಪಿಐ, ಸಿಪಿಎಂ, ಎಸ್‌ಯುಸಿಐ ಸೇರಿದಂತೆ ಹಲವು ಎಡಪಕ್ಷಗಳ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರಾಳ ದಿನಾಚರಣೆಯನ್ನಾಗಿ ಆಚರಿಸಲಾಯಿತು.

ನೋಟುಗಳ ನಿಷೇಧದಿಂದಾಗಿ ಸಾಮಾನ್ಯ ಜನರ ಮೇಲಾದ ದುಷ್ಪಾರಿಣಾಮವನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಿಪಿಎಂ ಮುಖಂಡ ಕೆ.ಎನ್.ಉಮೇಶ್, ನೋಟು ನಿಷೇಧದದಿಂದ ಆರ್ಥಿಕ ವ್ಯವಸ್ಥೆ ತೀರ ಹದಗೆಟ್ಟಿದ್ದು, ಜನ ಸಾಮಾನ್ಯರು ಆರ್ಥಿಕ ಪರಿಸ್ಥಿತಿಯಿಂದ ಚೇತರಿಸಿಕೊಳ್ಳಲು ಸಾಧ್ಯವಾಗದಷ್ಟು ದುರ್ಬಲಗೊಳಿಸಿತು. ಗ್ರಾಮೀಣ ಮಾರುಕಟ್ಟೆ, ರೈತರು, ಕೂಲಿ ಕಾರ್ಮಿಕರು, ದಿನಗೂಲಿ ನೌಕರರು, ಬೀದಿ ವ್ಯಾಪಾರಿಗಳು, ಸಣ್ಣ ಅಂಗಡಿಗಳಲ್ಲಿ ಜೀವನ ನಡೆಸುತ್ತಿದ್ದ ಸಾಮಾನ್ಯ ಜನರು ಸಂಕಷ್ಟದಲ್ಲಿ ಜೀವನ ನಿರ್ವಹಣೆ ಮಾಡಬೇಕಾದ ಸ್ಥಿತಿಗೆ ತಂದಿಡಲಾಗಿದೆ ಎಂದು ಆರೋಪಿಸಿದರು.

ಪ್ರಧಾನಮಂತ್ರಿ ನರೇಂದ್ರಮೋದಿಯವರು ಏಕಪಕ್ಷೀಯವಾದ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ತುಘಲಕ್ ಸರಕಾರವನ್ನು ನಡೆಸುತ್ತಿದ್ದಾರೆ. ಇದರಿಂದಾಗಿ ದೇಶದ ಜನರು ಆತಂಕದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ ಎಂದ ಅವರು, ದೇಶಿಯ ಕಾರ್ಪೋರೇಟ್‌ಗಳ ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಮೋದಿ ಸರಕಾರ ಅಧಿಕಾರ ನಡೆಸುತ್ತಿದೆ ಎಂದು  ಕಿಡಿಕಾರಿದರು.

ನೋಟು ಅಮಾನ್ಯೀಕರಣ ನಿರ್ಣಯ ಕೈಗೊಂಡವರು ಯಾರು, ಇದರಿಂದಾಗಿ ಅಂದಿನ ಆರ್‌ಬಿಐನ ಗವರ್ನರ್ ರಘುರಾಂ ರಾಜನ್ ರಾಜೀನಾಮೆ ನೀಡಿದ್ದೇಕೆ. ಈ ತೀರ್ಮಾನದಿಂದಾಗಿ ಸಾಲಿನಲ್ಲಿ ನಿಂತು 100 ಕ್ಕೂ ಅಧಿಕ ಜನರು ಮರಣ ಹೊಂದಿದರು, ಇದಕ್ಕೆ ಯಾರು ಜವಾಬ್ದಾರರು ಹಾಗೂ ಏಕೆ ಪರಿಹಾರ ಕೊಡಲಿಲ್ಲ ಮತ್ತು ಪ್ರಕರಣ ದಾಖಲಿಸಿಲ್ಲ. ನೋಟು ನಿಷೇಧಕ್ಕೂ ಮೊದಲು ಬ್ಯಾಂಕ್‌ಗಳಲ್ಲಿ ಹಣ ತುಂಬಿಸಿದವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ ಸೇರಿದಂತೆ ಹಲವು ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಬೇಕು ಎಂದರು.

ಸಿಪಿಐ ಮುಖಂಡ ಸಿದ್ಧನಗೌಡ ಪಾಟೀಲ್ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೋಟು ಅಮಾನ್ಯೀಕರಣ ಮಾಡಿದ್ದು, ಅವರ ವೈಫಲ್ಯತೆಯಾಗಿದೆ. ಇದರಿಂದಾಗಿ ಬಡ ಜನತೆ ಸಾಕಷ್ಟು ತೊಂದರೆಗೆ ಒಗಾದರು. ಆದರೆ, ಯಾರೊಬ್ಬ ಶ್ರೀಮಂತನೂ ಹಣ ಬದಲಾವಣೆ ಮಾಡಿಕೊಳ್ಳಲು ಬ್ಯಾಂಕುಗಳ ಮುಂದೆ ನಿಂತಿರುವುದು ಕಂಡು ಬಂದಿಲ್ಲ. ವಾರಗಟ್ಟಲೆ ಬ್ಯಾಂಕುಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಬಡ ಜನರು ತೊಂದರೆಗೀಡಾಗಿದ್ದಾರೆ ಎಂದು ತಿಳಿಸಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ದೊಡ್ಡ ಪ್ರಮಾಣದ ಸಾಲ ಪಡೆದಿರುವ ಕಾರ್ಪೊರೇಟ್ ಕಂಪೆನಿಗಳನ್ನು ರಕ್ಷಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಸ್ ಮಾಡಲಾಯಿತು. ಅಲ್ಲದೆ, ಈ ಸಾಲದಿಂದ ಬ್ಯಾಂಕ್‌ಗಳು ಕುಸಿಯುವಂತೆ ಈ ರೀತಿ ನೋಟು ಅಮಾನ್ಯ ಮಾಡಲಾಯಿತಾ ಎಂಬ ಅನುಮಾನ ಕಾಡುತ್ತಿದೆ. ಒಟ್ಟಾರೆಯಾಗಿ ಭ್ರಷ್ಟ ಶ್ರೀಮಂತರನ್ನು ರಕ್ಷಿಸುವ ಸಲುವಾಗಿ ಮೋದಿ ನೋಟು ಅಮಾನ್ಯ ಮಾಡಿದ್ದಾರೆ ಎಂದರು.

ವಿದೇಶದಲ್ಲಿರುವ ಕಪ್ಪುಹಣ ತಂದು ಬಡ ಜನರಿಗೆ ಖಾತೆಗಳಿಗೆ ತುಂಬಲಾಗುತ್ತದೆ ಎಂದು ಆಶ್ವಾಸನೆ ನೀಡಿದ್ದರು. ಆದರೆ, ಇದೀಗ ಅವರು ನೀಡಿದ ಭರವಸೆ ಹುಸಿಯಾಗಿದ್ದು, ಬಡವರ ಖಾತೆಗೆ ಜಮೆಯಾಗಬೇಕಿದ್ದ ಲಕ್ಷಾಂತರ ಕೋಟಿ ರೂ.ಗಳಷ್ಟು ಹಣವನ್ನು ಅಮಿತ್ ಶಾ ಮಗನ ಖಾತೆಗೆ ಜಮೆಯಾಗಿದೆ ಎಂದು ವಾಗ್ದಾಳಿ ನಡೆಸಿದ ಅವರು, ರೈತರ ಸಾಲ ಮನ್ನಾ ಮಾಡಲು ಹಣವಿಲ್ಲವಾದರೂ, ಕಾರ್ಪೊರೇಟ್ ಕಂಪೆನಿಗಳ ಸಾಲ ಮನ್ನಾ ಮಾಡಲು ಹಣ ಎಲ್ಲಿಂದ ಬಂದಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಮುಖಂಡರಾದ ಗೌರಮ್ಮ, ಆರ್.ಶ್ರೀನಿವಾಸ್, ಕೆ.ಎಸ್.ವಿಮಲಾ, ಕೆ.ಪ್ರಕಾಶ್, ಗೋಪಾಲಕೃಷ್ಣ ಅರಳಿಹಳ್ಳಿ, ಸುರೇಂದ್ರರಾವ್, ಕಾರ್ಮಿಕ ಮುಖಂಡ ಅನಂತ ಸುಬ್ಬಾರಾವ್, ಎಸ್‌ಯುಸಿಐನ ಶ್ರೀರಾಮ್, ಸಿಪಿಐ(ಎಂಎಲ್)ನ ಮುಖಂಡರಾದ ಆರ್.ಶ್ರೀನಿವಾಸ್, ವಿದ್ಯಾರ್ಥಿ ಮುಖಂಡರಾದ ಗುರುರಾಜ್ ದೇಸಾಯಿ, ಯುವಜನ ಮುಖಂಡರಾದ ಬಸವರಾಜ್ ಪೂಜಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X