ಡಾ.ಸೈಯದ್ ಶಾ ಖುಸ್ರೋ ಹುಸೇನಿ ಅವರಿಗೆ 'ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ

ಬೆಂಗಳೂರು, ನ.8: ಕಲಬುರಗಿಯ ಹಝ್ರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಹಾಗೂ ಖ್ವಾಜಾ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ.ಸೈಯದ್ ಶಾ ಖುಸ್ರೋ ಹುಸೇನಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2017ನೆ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಡಾ.ಸೈಯದ್ ಶಾ ಖುಸ್ರೋ ಹುಸೇನಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಮುಖ್ಯಮಂತ್ರಿ ಗೌರವಿಸಿದರು. ಪವಿತ್ರ ಉಮ್ರಾ ಯಾತ್ರೆ ಅಂಗವಾಗಿ ಸೌದಿ ಅರೇಬಿಯಾದಲ್ಲಿದ್ದ ಖುಸ್ರೋ ಹುಸೇನಿ ಅವರು, ನ.1ರಂದು ನಡೆದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಸಮಾಜಕಲ್ಯಾಣ ಸಚಿವ ಎಚ್.ಆಂಜನೇಯ, ಎನ್‌ಡಬ್ಲ್ಯು ಕೆಎಸ್ಸಾರ್ಟಿಸಿ ಅಧ್ಯಕ್ಷ ಇಲ್ಯಾಸ್ ಬಾಗ್ವಾನ್, ಶಿಕ್ಷಣ ತಜ್ಞ ಸಯ್ಯದ್ ಸೈಫುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





