Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನರ ನರಳಾಟದ ನಡುವೆ ಬಿಜೆಪಿ...

ಜನರ ನರಳಾಟದ ನಡುವೆ ಬಿಜೆಪಿ ಸಂಭ್ರಮಾಚರಣೆ: ವೇಣುಗೋಪಾಲ್

ವಾರ್ತಾಭಾರತಿವಾರ್ತಾಭಾರತಿ8 Nov 2017 10:33 PM IST
share
ಜನರ ನರಳಾಟದ ನಡುವೆ ಬಿಜೆಪಿ ಸಂಭ್ರಮಾಚರಣೆ: ವೇಣುಗೋಪಾಲ್

ಬೆಂಗಳೂರು, ನ.8: ನೋಟುಗಳ ಅಮಾನ್ಯೀಕರಣದಿಂದ ದೇಶದ ಜನತೆ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಜಿಡಿಪಿ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಂಭ್ರಮಾಚರಣೆ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಟೀಕಿಸಿದ್ದಾರೆ.

ಬುಧವಾರ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ನೋಟುಗಳ ಅಮಾನ್ಯೀಕರಣಗೊಂಡ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ‘ಭಾರತ ನರಳುತ್ತಿದೆ’ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಧಾನಿ ನರೇಂದ್ರಮೋದಿ ಕಳೆದ ಸಾಲಿನ ನ.8ರಂದು ಕೈಗೊಂಡು ನೋಟುಗಳ ಅಮಾನ್ಯೀಕರಣದ ನಿರ್ಧಾರದಿಂದ ಜನಸಾಮಾನ್ಯರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಇದರಿಂದ ಯಾರಿಗೂ ಅನುಕೂಲವಾಗಿಲ್ಲ ಎಂದು ಅವರು ಆರೋಪಿಸಿದರು.

ಗುಜರಾತ್ ರಾಜ್ಯದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸಲು ಕೇಂದ್ರ ಸರಕಾರ ಮನಸ್ಸು ಮಾಡುತ್ತಿಲ್ಲ. ನೋಟುಗಳ ಅಮಾನ್ಯೀಕರಣ ವಿಚಾರದಲ್ಲಿ ವಿಪಕ್ಷಗಳನ್ನು ಸಂಸತ್ತಿನಲ್ಲಿ ಎದುರಿಸುವ ಶಕ್ತಿ ನರೇಂದ್ರಮೋದಿ ಅವರಿಗಿಲ್ಲ ಎಂದು  ಹೇಳಿದರು.

ನೋಟುಗಳ ಅಮಾನ್ಯೀಕರಣದ ವಿರುದ್ಧ ಆಯೋಜಿಸಲಾಗಿರುವ ಈ ಪ್ರತಿಭಟನೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಇದನ್ನು ರಾಜ್ಯಾದ್ಯಂತ ಪ್ರತಿಭಟಿಸಬೇಕು. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ನಡೆಯಬೇಕು ಎಂದು ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪರಿವರ್ತನಾ ರ್ಯಾಲಿ ನಡೆಸುತ್ತಿದ್ದಾರೆ. ಕೇಂದ್ರ ಸರಕಾರ ಪರಿವರ್ತನೆಯಾಗಲಿ ಎಂದು ಯಡಿಯೂರಪ್ಪ ರ್ಯಾಲಿ ಮಾಡಲಿ ಎಂದು ವ್ಯಂಗ್ಯವಾಡಿದರು.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮಾತನಾಡಿ, ಮನಮೋಹನ್‌ ಸಿಂಗ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ದೇಶದ ಆರ್ಥಿಕತೆಯನ್ನು ಸದೃಢಗೊಳಿಸಿತ್ತು. ಐಎಂಎಫ್, ವಿಶ್ವಬ್ಯಾಂಕ್ 2022ರ ವೇಳೆಗೆ ಭಾರತವು ಚೀನಾವನ್ನು ಹಿಂದಿಕ್ಕಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತದೆ ಎಂದು ಹೇಳಿದ್ದವು. ಆದರೆ, ನೋಟುಗಳ ಅಮಾನ್ಯದಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ ಎಂದರು.

100 ದಿನಗಳಲ್ಲಿ ವಿದೇಶಗಳಿಂದ ಕಪ್ಪುಹಣ ತರುವುದಾಗಿ ಹೇಳಿದರು. ಜನರು ಅವರಿಗೆ ಒಂದು ಅವಕಾಶ ನೀಡಿದರು. ಆದರೆ, ಈವರೆಗೆ ಕಪ್ಪುಹಣ ತರುವುದಿರಲಿ, ವಿದೇಶಗಳಲ್ಲಿ ಇರುವ ಕಪ್ಪುಹಣದ ಪ್ರಮಾಣವೆಷ್ಟು ಎಂಬ ಲೆಕ್ಕವು ಅವರಿಗೆ ಸಿಗಲಿಲ್ಲ ಎಂದು ದೂರಿದರು.

ಲಕ್ಷಾಂತರ ಕೋಟಿ ನಗದು ಹಣವನ್ನು ರಾತ್ರೋರಾತ್ರಿ ಅಮಾನ್ಯ ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ? ಇದು ಪ್ರಜಾಪ್ರಭುತ್ವ ರಾಷ್ಟ್ರ. ದೇಶದಲ್ಲಿ 35 ಮಂದಿ ಮುಖ್ಯಮಂತ್ರಿಗಳಿದ್ದಾರೆ. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ, ಸಂವಿಧಾನಕ್ಕೆ ಗೌರವ ನೀಡದೆ ನೋಟುಗಳನ್ನು ಅಮಾನ್ಯ ಮಾಡಿದ್ದೇಕೆ ಎಂದು ಪ್ರಶ್ನಿಸಿದರು.

150 ಜನ ತಮ್ಮ ಪ್ರಾಣ ಕಳೆದುಕೊಂಡರು. ಅವರಿಗೆ ಪರಿಹಾರ ಏನಾದರೂ ನೀಡಿದ್ದೀರಾ? ನೋಟು ಅಮಾನ್ಯದಿಂದ ಆಗಿರುವ ತೊಂದರೆಗಳನ್ನು 50 ದಿನ ಸಹಿಸಿಕೊಳ್ಳಿ, ಎಲ್ಲವನ್ನೂ ಸರಿಪಡಿಸುತ್ತೇನೆ. ಇಲ್ಲದಿದ್ದರೆ, ಸಾರ್ವಜನಿಕವಾಗಿ ನನ್ನನ್ನು ನೇಣು ಹಾಕಿ ಎಂದು ನರೇಂದ್ರಮೋದಿ ಹೇಳಿದ್ದರು. 365 ದಿನಗಳು ಆಗಿವೆ, ಪರಿಸ್ಥಿತಿ ಹದಗೆಟ್ಟಿದೆ. ಈಗ ಹೇಳಿ 125 ಕೋಟಿ ಭಾರತೀಯರು ನಿಮ್ಮನ್ನು ಏನು ಮಾಡಬೇಕು ಎಂದು ಪ್ರಶ್ನಿಸಿದರು.

ಕೇಂದ್ರ ಸರಕಾರದ ಕಂಪೆನಿ ವ್ಯವಹಾರಗಳ ಸಚಿವಾಲಯ ನೀಡಿರುವ ಮಾಹಿತಿಯಂತೆ ನೋಟುಗಳ ಅಮಾನ್ಯೀಕರಣದ ಬಳಿಕ 2.40 ಲಕ್ಷ ಕಂಪೆನಿಗಳು ಮುಚ್ಚಲ್ಪಟ್ಟಿವೆ. ಇದರಿಂದ ಪ್ರಧಾನಿಗೆ ನಾಚಿಕೆ ಆಗುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನೋಟುಗಳ ಅಮಾನ್ಯೀಕರಣ ಮಾಡುವ ಮೂಲಕ ದೇಶದ ಆರ್ಥಿಕ ಪರಿಸ್ಥಿತಿಯನ್ನು ಕೊಂದ ನರೇಂದ್ರಮೋದಿ, ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದೊಂದು ಸಂಘಟಿತ ಲೂಟಿ ಎಂದು ಮನಮೋಹನ್‌ಸಿಂಗ್ ಹೇಳಿದರು. ಅದಾನಿ, ಅಂಬಾನಿ, ದೊಡ್ಡ ದೊಡ್ಡ ಉದ್ಯಮಿಗಳಿಗೆ ಸಹಾಯ ಮಾಡಲು ಕೇಂದ್ರ ಸರಕಾರ ಈ ತಿರ್ಮಾನ ಕೈಗೊಂಡಿತ್ತು ಎಂದು ಆರೋಪಿಸಿದರು.

ಎಚ್‌ಡಿಕೆ ವಿರುದ್ಧ ವಾಗ್ದಾಳಿ: ಸಿದ್ದರಾಮಯ್ಯ ನೇತೃತ್ವದ ಸರಕಾರವು ಜಾರಿಗೆ ತರುತ್ತಿರುವ ಕಾರ್ಯಕ್ರಮಗಳು ನನ್ನ ಅಧಿಕಾರಾವಧಿಯಲ್ಲಿ ನೀಡಿದ್ದು, ಅವುಗಳಿಗೆ ‘ಭಾಗ್ಯ’ ಸೇರಿಸಿ ತಮ್ಮದು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನೀಡಿದ ಹೇಳಿಕೆಯನ್ನು ಖಂಡಿಸಿದ ಪರಮೇಶ್ವರ್, ಅವರಿಗೆ ಏನಾಗಿದೆ ಎಂದು ಗೊತ್ತಿಲ್ಲ ಎಂದರು.

ಬಿಎಸ್‌ವೈ ವಿರುದ್ಧ ಕಿಡಿ: ಸಿದ್ದರಾಮಯ್ಯ ಸರಕಾರ ಕಳೆದ ನಾಲ್ಕು ವರ್ಷದಿಂದ ನಿದ್ದೆ ಮಾಡುತ್ತಿತ್ತು. ಈಗ ನಿದ್ದೆಯಿಂದ ಎದ್ದಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅವರು ಈಗ ಎದ್ದು ಯಾತ್ರೆ ಹೊರಟಿದ್ದಾರೆ. ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲು ಅವರಿಗೆ ಆಗುತ್ತಿಲ್ಲ ಎಂದು ಹೇಳಿದರು.

ಯಡಿಯೂರಪ್ಪನವರಿಗೆ ಜಿಎಸ್‌ಟಿ ಎಲ್ಲ ಗೊತ್ತಾಗುವುದಿಲ್ಲ. ರಾಮನವಮಿ ಸಂದರ್ಭದಲ್ಲಿ ಮಜ್ಜಿಗೆ, ಪಾನಕ ಉಚಿತವಾಗಿ ವಿತರಿಸುತ್ತಾರೆ. ಆದರೆ, ಜಿಎಸ್‌ಟಿ ಬಂದ ನಂತರ ಹೊಟೇಲ್‌ನಲ್ಲಿ ಸೇವಿಸುವ ಮಜ್ಜಿಗೆಗೆ ಶೇ.18ರಷ್ಟು ತೆರಿಗೆ ನೀಡಬೇಕಾಗಿದೆ. ಬಿಜೆಪಿಯವರನ್ನು ಇದೇ ರೀತಿ ಅಧಿಕಾರದಲ್ಲಿ ಮುಂದುವರೆಯಲು ಬಿಟ್ಟರೆ ಪಾನಕ ಹಾಗೂ ಕೋಸಂಬರಿಗೂ ತೆರಿಗೆ ವಿಧಿಸುತ್ತಾರೆ ಎಂದು ಅವರು ಟೀಕಿಸಿದರು.

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಡಿಯಲ್ಲಿ ಪ್ರತಿಯೊಂದು ಮನೆಗೂ ಪಕ್ಷದ ಕಿರುಹೊತ್ತಿಗೆಯನ್ನು ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. 2018ರಲ್ಲಿ ಮತ್ತೆ ನಮ್ಮ ಸರಕಾರ ಅಧಿಕಾರಕ್ಕೆ ಬರಬೇಕು ಎಂದು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X