ಚಿಕ್ಕಮಗಳೂರು: ನ.10 ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
ಚಿಕ್ಕಮಗಳೂರು, ನ.8: ಜಿಲ್ಲಾಡಳಿತದ ವತಿಯಿಂದ ನ.10 ರಂದು ಮಧ್ಯಾಹ್ನ 3 ಗಂಟೆಗೆ ಕುವೆಂಪು ಕಲಾ ಮಂದಿರದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ನಡೆಯಲಿದೆ.
ನಗರಾಭಿವೃದ್ಧಿ ಹಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್. ರೋಷನ್ ಬೇಗ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಸಿ.ಟಿ.ರವಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಪ್ರಧಾನ ಮಂತ್ರಿ ಹಾಗೂ ಸಂಸದ ಎಚ್.ಡಿ.ದೇವೇಗೌಡ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿಕೃಷ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿ.ಎಸ್. ಚೈತ್ರಾಶ್ರೀ, ಸಂಸದ ಜೈರಾಮ್‌ರಮೇಶ್, ಶಾಸಕರಾದ ಡಿ.ಎನ್.ಜೀವರಾಜ್, ಬಿ.ಬಿ.ನಿಂಗಯ್ಯ, ವೈ.ಎಸ್.ವಿ.ದತ್ತ, ಜಿ.ಎಚ್.ಶ್ರೀನಿವಾಸ್ ಪಾಲ್ಗೊಳ್ಳಲಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಮೋಟಮ್ಮ, ಎಂ.ಕೆ.ಪ್ರಾಣೇಶ್, ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಎ.ಎನ್ ಮಹೇಶ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಪಿ ಮೋಹನ್, ನಗರಸಭೆ ಅಧ್ಯಕ್ಷೆ ಶಿಲ್ಪಾ ರಾಜಶೇಖರ್, ಸಿಡಿಎ ಅಧ್ಯಕ್ಷ ಸೈಯದ್ ಹನೀಫ್, ತಾಪಂ ಅಧ್ಯಕ್ಷ ಈ.ಆರ್. ಮಹೇಶ್ ಭಾಗವಹಿಸುವರು. ಸಾಹಿತಿ ರವೀಶ್ ಟಿಪ್ಪುಸುಲ್ತಾನ್ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.





