ನ.12 ರಂದು ಅಷ್ಟದಿಗ್ಗಜರು ಕಾರ್ಯಕ್ರಮ
ಬೆಂಗಳೂರು, ನ.9: ಭಾಗವತರು ಸಾಂಸ್ಕೃತಿಕ ಸಂಘಟನೆ ವತಿಯಿಂದ ನ.12 ರಂದು ವಿವಿಧ ಎಂಟು ಮಂದಿ ಸಾಹಿತಿಗಳ ಶತಮಾನೋತ್ಸವ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಷ್ಟದಿಗ್ಗಜರು ಎಂಬ ಕಾರ್ಯಕ್ರಮವನ್ನು ನಗರದ ನಯನ ಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಕೆ.ರೇವಣ್ಣ, ಹಿರಿಯ ಸಾಹಿತಿಗಳಾದ ಗೋಪಾಲಕೃಷ್ಣ ಅಡಿಗ, ಎಂ.ಕೆ.ಇಂದಿರಾ, ವಾಣಿ, ಜಿ.ವಿ.ಅಯ್ಯರ್, ಡಾ.ದೇ.ಜವರೇಗೌಡ, ಟಿ.ಸುನಂದಮ್ಮ, ಬಿ.ಎಸ್.ರಂಗಾ, ಪ್ರೊ.ಬಿ.ಚಂದ್ರಶೇಖರ್ ಅವರ ಶತಮಾನೋತ್ಸವ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಅಂದು ವಿಚಾರ ಸಂಕಿರಣ, ಪುಸ್ತಕ ಬಿಡುಗಡೆ, ಗಾಯನ ಹಾಗೂ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಹಿರಿಯ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಚಾಲನೆ ನೀಡಲಿದ್ದು, ಪತ್ರಕರ್ತ ಎನ್.ಎಸ್.ಶ್ರೀಧರ ಮೂರ್ತಿ ಸಂಪಾದಿತ ಅಷ್ಟದಿಗ್ಗಜರ ಕುರಿತ ಲೇಖನಗಳ ಸಂಗ್ರಹದ ಪುಸ್ತಕವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶುಕುಮಾರ್ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಡಾ.ಕೆ.ಸತ್ಯನಾರಾಯಣ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.





