ಕೇಂದ್ರ, ದಿಲ್ಲಿ, ಪಂಜಾಬ್, ಹರ್ಯಾಣ ಸರಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸು

ಹೊಸದಿಲ್ಲಿ, ನ. 9: ಚಳಿಗಾಲದಲ್ಲಿ ಉಲ್ಬಣವಾಗುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆ ವಿವರ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಕೇಂದ್ರ, ದಿಲ್ಲಿ, ಪಂಜಾಬ್ ಹಾಗೂ ಹರ್ಯಾಣ ಸರಕಾರಗಳಿಗೆ ನಿರ್ದೇಶಿಸಿದೆ.
ನಿರಂತರ ಮೂರನೆ ದಿನವಾದ ಬುಧವಾರ ಕೂಡ ದಿಲ್ಲಿ ಹಾಗೂ ರಾಷ್ಟ್ರ ರಾಜಧಾನಿ ವಲಯ (ಎನ್‌ಸಿಆರ್) ಗಂಭೀರ ವಾಯು ಮಾಲಿನ್ಯ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ದಿಲ್ಲಿ, ಪಂಜಾಬ್, ಹರ್ಯಾಣ ಸರಕಾರಗಳಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ನೋಟಿಸು ಜಾರಿ ಮಾಡಿದೆ.
ವರ್ಷ ಪೂರ್ತಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿಲ್ಲ. ಇದರಿಂದ ದಿಲ್ಲಿ ಹಾಗೂ ಎನ್‌ಸಿಆರ್‌ನ ನಿವಾಸಿಗಳ ಬದುಕುವ ಹಕ್ಕು ಉಲ್ಲಂಘನೆಯಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕು ಆಯೋಗ ಹೇಳಿದೆ.
Next Story





