Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ ಯಾವ ನ್ಯಾಯಬೆಲೆ ಅಂಗಡಿಯಲ್ಲೂ...

ರಾಜ್ಯದ ಯಾವ ನ್ಯಾಯಬೆಲೆ ಅಂಗಡಿಯಲ್ಲೂ ಪಡಿತರ ಪಡೆಯುವ ವ್ಯವಸ್ಥೆ ಜಾರಿ: ಸಚಿವ ಖಾದರ್

ಬಿಪಿಎಲ್ ಕಾರ್ಡುದಾರರಿಗೆ ಸಿಹಿ ಸುದ್ದಿ

ವಾರ್ತಾಭಾರತಿವಾರ್ತಾಭಾರತಿ9 Nov 2017 8:23 PM IST
share
ರಾಜ್ಯದ ಯಾವ ನ್ಯಾಯಬೆಲೆ ಅಂಗಡಿಯಲ್ಲೂ ಪಡಿತರ ಪಡೆಯುವ ವ್ಯವಸ್ಥೆ ಜಾರಿ:  ಸಚಿವ ಖಾದರ್

ಬೆಂಗಳೂರು, ನ.9: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ವಲಸೆ ಕಾರ್ಮಿಕರು ಸೇರಿದಂತೆ ಪಡಿತರ ಚೀಟಿದಾರರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಡಿತರ ಪಡೆಯಲು ಅವಕಾಶ ಕಲ್ಪಿಸುವ ನೂತನ ಯೋಜನೆ ಆರಂಭಿಸಲಾಗುತ್ತಿದೆ ಎಂದು ಆಹಾರ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿತ ನ್ಯಾಯಬೆಲೆ ಅಂಗಡಿಯಲ್ಲೇ ಪಡಿತರ ಪಡೆಯುವ ನಿಯಮ ಇತ್ತು. ಇದೀಗ ಅದನ್ನು ಬದಲಾವಣೆ ಮಾಡಿದ್ದು, ನ್ಯಾಯಬೆಲೆ ಅಂಗಡಿ ಮಾಲಕರ ದುವರ್ತನೆ ತಪ್ಪಿಸಲು ನೂತನ ವ್ಯವಸ್ಥೆ ಜಾರಿ ತರಲಾಗುವುದು ಎಂದರು.

ಕಲಬುರಗಿ ಸೇರಿ ವಿವಿಧೆಡೆಗಳಿಂದ ಬೆಂಗಳೂರಿಗೆ ಉದ್ಯೋಗ ಅರಸಿ ಬರುವ ಕಾರ್ಮಿಕರು ತಾವಿರುವ ಜಾಗದ ಸಮೀಪದಲ್ಲಿರುವ ನ್ಯಾಯಬೆಲೆ ಅಂಗಡಿಗೆ ತೆರಳಿ, ಬಯೋಮೆಟ್ರಿಕ್ ನೀಡಿ ಪಡಿತರ ಪಡೆಯಬಹುದು. ಅದೇ ರೀತಿ ಕಾರ್ಡ್‌ದಾರರು ತಮಗೆ ಇಷ್ಟ ಬಂದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದು ಎಂದು ಅವರು ವಿವರಿಸಿದರು.

ಆಧಾರ್ ಸಾಕು: ಹೊಸ ಪಡಿತರ ಚೀಟಿಗೆ ಮನೆ ಸಂಖ್ಯೆ, ವಿದ್ಯುತ್ ಬಿಲ್ ಅಗತ್ಯವಿಲ್ಲ. ಬದಲಿಗೆ ಆಧಾರ್ ಸಂಖ್ಯೆಯಷ್ಟೇ ಸಾಕು ಎಂದ ಅವರು, ಹೊಸ ಪಡಿತರ ಚೀಟಿಗೆ 9ಲಕ್ಷ ಅರ್ಜಿಗಳು ಬಂದಿದ್ದು, ಈಗಾಗಲೇ 4.50ಲಕ್ಷ ಕಾರ್ಡುಗಳನ್ನು ಮುದ್ರಿಸಲಾಗಿದೆ. ತ್ವರಿತವಾಗಿ ಕಾರ್ಡ್ ವಿಲೇಗೆ ಕ್ರಮ ವಹಿಸಲಾಗಿದೆ ಎಂದರು.

ಡಿಸೆಂಬರ್ ಮೊದಲ ಜಾರಿ: ಅನಿಲಭಾಗ್ಯ ಯೋಜನೆ ಫಲಾನುಭವಿಗಳ ಆಯ್ಕೆಗೆ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಈ ಸಮಿತಿಗೆ ಶಾಸಕರು ಒಂದು ವಾರದಲ್ಲಿ ಫಲಾನುಭವಿಗಳ ಪಟ್ಟಿಯನ್ನು ನೀಡಬೇಕು ಎಂದು ಅವರು ತಾಕೀತು ಮಾಡಿದರು.

ರಾಜ್ಯದಲ್ಲಿ 30ಲಕ್ಷ ಕುಟುಂಬಗಳು ಅನಿಲ ಸಂಪರ್ಕಿ ರಹಿತ ಎಂದು ಗುರುತಿಸಿದ್ದು, ಆ ಪೈಕಿ ಕೇಂದ್ರ ಸರಕಾರ 5ಲಕ್ಷ ಕುಟುಂಬಗಳಿಗೆ ‘ಉಜ್ವಲ’ ಯೋಜನೆಯಡಿ ಅನಿಲ ಸಂಪರ್ಕ ಕಲ್ಪಿಸಲಿದೆ. ರಾಜ್ಯ ಸರಕಾರವೂ ಉಳಿದ 25 ಲಕ್ಷ ಕುಟುಂಬಗಳಿಗೆ ಅನಿಲ ಸಂಪರ್ಕ ಕಲ್ಪಿಸಲು ನಿರ್ಧರಿಸಿದೆ ಎಂದರು.

ರಾಜ್ಯ ಸರಕಾರ ಜಿಲ್ಲಾವಾರು ಕೋಟಾ ನಿಗದಿಮಾಡಲಿದ್ದು, ಮೊದಲ ಹಂತದಲ್ಲಿ 10ಲಕ್ಷ ಮಂದಿಗೆ ಅನಿಲಭಾಗ್ಯ (ತಲಾ 4,040 ರೂ.ವೆಚ್ಚದಲ್ಲಿ) ಯೋಜನೆಯಡಿ 2 ರಿಫಿಲಿಂಗ್ ಸಿಲಿಂಡರ್‌ಗಳು, ಸ್ಟವ್, ಲೈಟರ್ ಸಹಿತ ಉಚಿತ ಅನಿಲ ಸಂಪರ್ಕ ಕಲ್ಪಿಸಲಾಗುವುದೆಂದ ಅವರು, ಡಿಸೆಂಬರ್ ಮೊದಲ ವಾರದಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಉಳ್ಳಾಲದಲ್ಲಿ ಕ್ಯಾಂಟೀನ್: ಅಗ್ಗದ ದರದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಪಾಹಾರ-ಊಟ ಒದಗಿಸುವ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಉಳ್ಳಾಲದಲ್ಲಿಯೂ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X