ಶಾಸಕ ಮೊಯ್ದಿನ್ ಬಾವಗೆ ನಿಂದನೆ: ದೂರು

ಮಂಗಳೂರು, ನ.9: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯ್ದಿನ್ ಬಾವಾ ಅವರನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನಿಂದಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನಿಯೋಗವು ಪಣಂಬೂರ್ ಪೊಲೀಸರಿಗೆ ಮನವಿ ಸಲ್ಲಿಸಿದೆ.
ಯತೀಶ್ ಪೆರುವಾಯಿ ಮತ್ತು ಅಶ್ವತ್ ಕುಮಾರ್ ಕೊಡಿಯಾಲ್‌ಬೈಲ್ ಎಂಬ ಹೆಸರಿನಲ್ಲಿ ಶಾಸಕರನ್ನು ಅಶ್ಲೀಲ ಶಬ್ದಗಳಿಂದ ನಿಂದಿಸಲಾಗಿದೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿರುವ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ದೂರು ದಾಖಲಿಸಿದರು.
ನಿಯೋಗದಲ್ಲಿ ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ ಕಾಮತ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹಾರಿಸ್ ಬೈಕಂಪಾಡಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಉತ್ತಮ್ ಆಳ್ವ, ಆಶಾ ಶೆಟ್ಟಿ, ಶಿಶಿಲಾ ಶೆಟ್ಟಿ, ಇಲ್ಯಾಸ್, ಸರ್ಫುದ್ದೀನ್, ಫೈಸಲ್ ಅಂಗರಗುಂಡಿ ಮತ್ತಿತರರು ಉಪಸ್ಥಿತರಿದ್ದರು.
Next Story





