Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.13 ರಂದು ಭೂಮಿ, ವಸತಿಗಾಗಿ ಆಗ್ರಹಿಸಿ...

ನ.13 ರಂದು ಭೂಮಿ, ವಸತಿಗಾಗಿ ಆಗ್ರಹಿಸಿ 'ಬೆಳಗಾವಿ ಚಲೋ'

ವಾರ್ತಾಭಾರತಿವಾರ್ತಾಭಾರತಿ10 Nov 2017 6:15 PM IST
share

ಬೆಂಗಳೂರು, ನ.10: ಭೂಮಿ ಹಾಗೂ ವಸತಿಗಾಗಿ ಆಗ್ರಹಿಸಿ ನ.13 ರಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಸಂಚಾಲಕ ಕುಮಾರ್ ಸಮತಳ, ಕಂದಾಯ, ಗೋಮಾಳ, ಅರಣ್ಯ ಸೇರಿದಂತೆ ವಿವಿಧ ಸರಕಾರಿ ಭೂಮಿಯಲ್ಲಿ ಹತ್ತಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಲಕ್ಷಾಂತರ ಭೂ ರಹಿತರು ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಹೋರಾಟ ಸಮಿತಿಯಿಂದ ನಾಲ್ಕು ಹಂತದಲ್ಲಿ ಹೋರಾಟ ಮಾಡಲಾಗಿದೆ. ಆದರೆ, ಸರಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅಲ್ಲದೆ, ಸರಕಾರ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಮರೆತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೂರು-ನಾಲ್ಕು ದಶಕಗಳಿಂದಲೂ ಲಕ್ಷಾಂತರ ಭೂ ರಹಿತ ದಲಿತ, ಆದಿವಾಸಿ, ಹಿಂದುಳಿದ ವರ್ಗಗಳು ಭೂಮಿ ಮತ್ತು ಮನೆಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಲೇ ಇದಾರೆ. ಒಂದು ತಲೆಮಾರಿನ ಕಾಲಾವಧಿಯಲ್ಲಿ ಹಲವು ಸರಕಾರಗಳು, ಮಂತ್ರಿಗಳು, ಶಾಸಕರು ಬಂದು ಹೋದರೂ ಭೂಮಿಗಾಗಿ ಸಲ್ಲಿಸಿರುವ ಅರ್ಜಿಗಳು ವಿಲೇವಾರಿಯಾಗಿಲ್ಲ. ಬದಲಿಗೆ, ಸರಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಅಕ್ರಮವಾಗಿ ಕಬಳಿಕೆ ಮಾಡಿದ್ದಾರೆ ಎಂಬ ನೆಪವೊಡ್ಡಿ ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2016 ರಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಬಡವರಿಗೆ ಭೂಮಿ ವಸತಿ ನೀಡುವುದು ನಮ್ಮ ಸರಕಾರದ ಆದ್ಯತೆಯೇ ಹೊರತು ಕಂಪೆನಿಗಳಿಗಲ್ಲ. ಕಾಗೋಡು ತಿಮ್ಮಪ್ಪರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುತ್ತೇವೆ. ಈಗ ಉಳುಮೆ ಮಾಡುತ್ತಿದ್ದು, ಅರ್ಜಿ ಹಾಕಿರುವವರಿಗೆ ಕೂಡಲೇ ಭೂಮಿ ಮಂಜೂರು ಮಾಡುತ್ತೇವೆ. ಉಳಿದಂತೆ, ಹಂಚಿಕೆಗೆ ಎಷ್ಟು ಸರಕಾರಿ ಭೂಮಿ ಲಭ್ಯವಿದೆ ಎಂಬುದನ್ನು ಸಮೀಕ್ಷೆ ಮಾಡಿಸಿ, ಅದನ್ನು ಬಡವರಿಗೆ ಹಂಚಿಕೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಆದರೆ, ಇದುವರೆಗೂ ಇದರಲ್ಲಿ ಒಂದನ್ನೂ ಪೂರ್ಣಗೊಳಿಸಿಲ್ಲ ಎಂದು ತಿಳಿಸಿದರು.

ಕೊಡಗು, ಹಾವೇರಿ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ತುಮಕೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬಗರ್‌ಹುಕುಂ ಅಡಿಯಲ್ಲಿ ಸಾಗುವಳಿ ಮಾಡಿದ್ದ ಬೆಳೆಗಳನ್ನು ನಾಶಪಡಿಸಿ, ಅವರ ಮನೆಗಳನ್ನು ಜೆಸಿಬಿ ಯಂತ್ರಗಳ ಮೂಲಕ ಧ್ವಂಸಗೊಳಿಸಿದ್ದಾರೆ. ಅಲ್ಲದೆ, ರೈತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ದೊಡ್ಡ ಭೂ ಕಬಳಿಕೆದಾರರಿಂದ ಸರಕಾರಿ ಭೂಮಿ ವಶಪಡಿಸಿಕೊಳ್ಳಲು ಎಂದು ರಚನೆಯಾದ ಭೂ ಕಬಳಿಕೆ ನ್ಯಾಯಾಲಯದಲ್ಲಿ ನೂರಾರು ರೈತರ ಮೇಲೆ ಭೂ ಕಬಳಿಕೆ ಪ್ರಕರಣಗಳನ್ನು ದಾಖಲಿಸಿ ಶಿಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.

ಆದುದರಿಂದ ರೈತರ ಬೇಡಿಕೆಗಳನ್ನು ಅಧಿವೇಶನದಲ್ಲಿ ಮಂಡಿಸಬೇಕು ಮತ್ತು ಅದನ್ನು ಪರಿಹರಿಸಲು ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ, ರಾಜ್ಯ ಸರಕಾರ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯಿಸಿ ಸರಕಾರದ ಗಮನ ಸೆಳೆಯಲು ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ. ನ.13 ರಿಂದ ಆರಂಭವಾಗುವ ಚಳವಳಿ ನ.23 ರವರೆಗೂ ಎಲ್ಲ ಶಾಸಕರ ಕಚೇರಿ ಎದುರು ಮುಂದುವರಿಯುತ್ತದೆ ಎಂದರು.

ಬೇಡಿಕೆಗಳು:
-ಭೂಮಿ ಮತ್ತು ವಸತಿ ಸಮಸ್ಯೆ ಶೀಘ್ರ ಪರಿಹಾರವಾಗುವ ಮಾರ್ಗಗಳನ್ನು ಚರ್ಚಿಸಲು ಉನ್ನತ ಮಟ್ಟದ ಸಮಿತಿ ರಚಿಸಬೇಕು.
-ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಬಡವರನ್ನು ಮನೆ ಮತ್ತು ಹೊಲಗಳಿಂದ ಹೊರಹಾಕಿ ಬೀದಿ ಪಾಲು ಮಾಡಬಾರದು ಎಂದು ಸುಗ್ರೀವಾಜ್ಞೆ ಹೊರಡಿಸಬೇಕು.
-ಈಗಾಗಲೇ ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿರುವ ಅಥವಾ ಮನೆ ಕಟ್ಟಿಕೊಂಡಿರುವ ಹಾಗೂ ಅರ್ಜಿ ಸಲ್ಲಿಸಿರುವ ಜನರಿಗೆ ತಕ್ಷಣವೇ ಅವರ ಹಕ್ಕು ಮಾನ್ಯ ಮಾಡುವ ತೀರ್ಮಾನ ಕೈಗೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳು ಈಡೇರಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X