ರಸ್ತೆ ಅಪಘಾತ: ಅಪರಿಚಿತ ವ್ಯಕ್ತಿ ಮೃತ್ಯು
ಬೆಂಗಳೂರು, ನ.10: ನಗರದ ಮಡಿವಾಳದ ಮೇಲ್ಸೇತುವೆ ರಸ್ತೆಯಲ್ಲಿ ವೇಗವಾಗಿ ಬಂದ ವಾಹನ ಹರಿದು ಅಪರಿಚಿತ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಸುಮಾರು 55 ವರ್ಷ ವಯಸ್ಸಿನ ವ್ಯಕ್ತಿ ಎಂದು ತಿಳಿದುಬಂದಿದ್ದು, ಹೆಸರು, ವಿಳಾಸ ಪತ್ತೆಯಾಗಿಲ್ಲ. ಅಪಘಾತವೆಸಗಿದ ವಾಹನವು ಪತ್ತೆಯಾಗಿಲ್ಲ.
ಈ ಸಂಬಂಧ ಮಡಿವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story





