ರಾಷ್ಟ್ರೀಯ ಕರಾಟೆ: ಬ್ಲ್ಯಾಕ್ ಬೆಲ್ಟ್‌ನಲ್ಲಿ ಸಹನಾಗೆ ಚಿನ್ನ

ಬಂಟ್ವಾಳ, ನ. 10: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೊ ವತಿಯಿಂದ ಮಂಗಳೂರಿನಲ್ಲಿ ನಡೆದ ಇಂಡಿಯನ್ ಕರಾಟೆ ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್ 2017ರಲ್ಲಿ ಕುಮಿಟೆ ವಿಭಾಗದ 40-44 ಕೆ.ಜಿ. ವಿಭಾಗದ ಬ್ಲ್ಯಾಕ್ ಬೆಲ್ಟ್ ಕರಾಟೆ ಸ್ಪರ್ಧೆಯಲ್ಲಿ ಸಹನಾ ಎಂ. ಶೆಟ್ಟಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ನರ್ವಲ್ದಡ್ಡದ ಸಹನಾ, ಬಂಟ್ವಾಳ ಎಸ್‌ವಿಎಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ.
ಸಹನಾ ಕರಾಟೆಯಲ್ಲಿ ವಿಶೇಷ ಸಾಧನೆಗೈದು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿ ಪ್ರಶಸ್ತಿ ಪುರಸ್ಕೃತಳಾಗಿದ್ದಾರೆ.
Next Story





