Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದ ಆಡಳಿತದ ಬಗ್ಗೆ ಅವಧಿ ಬಳಿಕ...

ಮೋದಿ ಸರಕಾರದ ಆಡಳಿತದ ಬಗ್ಗೆ ಅವಧಿ ಬಳಿಕ ತೀರ್ಮಾನಿಸಿ: ಕೇಂದ್ರ ಸಚಿವ ಚೌಧರಿ

ವಾರ್ತಾಭಾರತಿವಾರ್ತಾಭಾರತಿ10 Nov 2017 8:12 PM IST
share
ಮೋದಿ ಸರಕಾರದ ಆಡಳಿತದ ಬಗ್ಗೆ ಅವಧಿ ಬಳಿಕ ತೀರ್ಮಾನಿಸಿ: ಕೇಂದ್ರ ಸಚಿವ ಚೌಧರಿ

ಕೊಲ್ಕತ್ತಾ, ನ.10: ಮೋದಿ ಸರಕಾರ ಯಾವ ರೀತಿಯ ಆಡಳಿತ ನೀಡಿದೆ ಎಂಬ ಬಗ್ಗೆ ಅದರ ಆಡಳಿತ ಅವಧಿ ಮುಗಿದ ನಂತರವೇ ತೀರ್ಮಾನಿಸಬೇಕು ಎಂದು ಕೇಂದ್ರ ಸಚಿವ ಹರಿಬಾಯಿ ಪಾರ್ಥಿಬಾಯಿ ಚೌಧರಿ ತಿಳಿಸಿದ್ದಾರೆ. ಹಿಂದೂಸ್ಥಾನ್ ಕೋಪರ್ ಲಿಮಿಟೆಡ್ (ಎಚ್‌ಸಿಎಲ್)ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡುತ್ತಿದ್ದ ಕಲ್ಲಿದ್ದಲು ಮತ್ತು ಗಣಿ ರಾಜ್ಯ ಸಚಿವರಾಗಿರುವ ಚೌಧರಿ ಕೇಂದ್ರ ಸರಕಾರ ತನ್ನ ಕೆಲಸ ಮಾಡಲು ಸಾಕಷ್ಟು ಸಮಯಾವಕಾಶ ನೀಡಬೇಕು ಎಂದು ಹೇಳಿದರು.

ನೋಟು ಅಮಾನ್ಯ ಮತ್ತು ಜಿಎಸ್‌ಟಿ ಜಾರಿಯನ್ನು ವಿರೋಧಿಸಿ ಪ್ರತಿಪಕ್ಷಗಳು ಸರಕಾರದ ವಿರುದ್ಧ ಮಾಡುತ್ತಿರುವ ಟೀಕೆಗಳಿಗೆ ಉತ್ತರವಾಗಿ ಅವರು ಈ ಮಾತನ್ನಾಡಿದರು. ಹಾಲು ಮೊಸರಾಗಬೇಕಾದರೆ ಅದಕ್ಕೆ ಹನ್ನೆರಡು ಗಂಟೆಗಳ ಸಮಯ ನೀಡಬೇಕಾಗುತ್ತದೆ. ಪ್ರತೀ ಗಂಟೆಗೊಮ್ಮೆ ಅದನ್ನು ತೆರೆದು ನೋಡುತ್ತಾ ಇದ್ದರೆ ಮೊಸರು ತಯಾರಾಗಲು ಸಾಧ್ಯವಿಲ್ಲ ಎಂದು ಚೌಧರಿ ಹೇಳಿದರು.

ಕೇಂದ್ರ ಸರಕಾರವು 2014ರ ಲೋಕಸಭೆ ಚುನಾವಣೆಯ ವೇಳೆ ನೀಡಿದ್ದಂತಹ ಅಚ್ಛೇದಿನ ಆಶ್ವಾಸನೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ನೋಟು ಅಮಾನ್ಯೀಕರಣ ಹಾಗೂ ಜಿಎಸ್‌ಟಿಯನ್ನು ತರಾತುರಿಯಲ್ಲಿ ಯಾವುದೇ ಮುಂದಾಲೋಚನೆಯಿಲ್ಲದೆ ಜಾರಿ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಈ ಎಲ್ಲಾ ಯೋಜನೆಗಳಿಂದ ಮೊದಲಿಗೆ ಸ್ವಲ್ಪ ಕಷ್ಟಗಳು ಎದುರಾಗಿರುವುದು ಸುಳ್ಳಲ್ಲ ಆದರೆ ಇವುಗಳಿಂದ ದೀರ್ಘಕಾಲಿಕ ಲಾಭವಾಗಲಿದೆ ಎಂದು ಚೌಧರಿ ತಿಳಿಸಿದರು. ಹಿಂದಿನ ಮೈತ್ರಿ ಸರಕಾರಗಳ ಸಮಯದಲ್ಲಿ ಮೈತ್ರಿಪಕ್ಷಗಳು ಕೇಂದ್ರ ಸರಕಾರವನ್ನು ಸರಿಯಾಗಿ ಕೆಲಸ ಮಾಡಲು ಬಿಡುತ್ತಿರಲಿಲ್ಲ. ಆದರೆ ಈಗ ಬಿಜೆಪಿ ಸರಕಾರ ಈ ಮೂರು ವರ್ಷಗಳಲ್ಲಿ 800 ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ಅವರು ವಿವರಿಸಿದರು.

2024ರ ಹೊತ್ತಿಗೆ ಭಾರತವು ಒಂದು ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಹೇಳಿದ ಅವರು, 2019ರ ಹೊತ್ತಿಗೆ ಪ್ರತಿ ಹಳ್ಳಿಗೂ ವಿದ್ಯುತ್ ಸಂಪರ್ಕ ಒದಗಿಸಲಾಗುವುದು ಎಂದು ತಿಳಿಸಿದರು. ಸಾರ್ವಜನಿಕ ಕ್ಷೇತ್ರದ ಉದ್ಯೋಗಿಗಳು ತಮ್ಮ ಕೆಲಸದ ಮೂಲಕ ದೇಶ ಸೇವೆ ಮಾಡಬೇಕು ಮತ್ತು ಸಾರ್ವಜನಿಕ ಕ್ಷೇತ್ರದ ಅಭಿವೃದ್ಧಿಗೆ ಕಾಣಿಕೆ ನೀಡಬೇಕು ಎಂದು ಮನವಿ ಮಾಡಿದ ಚೌಧರಿ, ಉತ್ಪಾದನೆಯನ್ನು ನಾಲ್ಕು ಪಟ್ಟು ಹೆಚ್ಚುಗೊಳಿಸುವ ಎಚ್‌ಸಿಎಲ್ ನ ಯೋಜನೆಯು ಮೋದಿಯವರ ಮೇಕ್ ಇನ್ ಇಂಡಿಯಾ ಯೋಜನೆಯ ಭಾಗವಾಗಿದೆ ಎಂದು ವಿವರಿಸಿದರು. ಎಚ್‌ಸಿಎಲ್ ಗಣಿ ವಿಸ್ತಾರ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ ಉತ್ಪಾದನೆಯನ್ನು 3.4 ಮಿಲಿಯನ್ ಟನ್‌ಗಳಿಂದ 12.4 ಮಿಲಿಯನ್ ಟನ್ ಗೆ ಏರಿಸಲಾಗುವುದು. ಇದಕ್ಕೆ 700 ಮಿಲಿಯನ್ ಡಾಲರ್ ವೆಚ್ಚವಾಗಲಿದೆ ಎಂದು ಎಚ್‌ಸಿಎಲ್ ಸಿಎಂಡಿ ಸಂತೋಷ್ ಶರ್ಮಾ ತಿಳಿಸಿದರು.

ಇದರಿಂದಾಗಿ ಭಾರತ ಆಂತರಿಕ ಉಪಯೋಗಕ್ಕಾಗಿ ಮಾಡಿಕೊಳ್ಳುತ್ತಿರುವ ತಾಮ್ರದ ಆಮದಿನಲ್ಲಿ ಗಣನೀಯ ಇಳಿಕೆಯಾಗಲಿದೆ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X