ನ.19ರಂದು ಉಡುಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಉಡುಪಿ, ನ.10: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.19 ರಂದು ಉಡುಪಿಗೆ ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಇಂದು ಪೂರ್ವಬಾವಿ ಸಭೆ ನಡೆಯಿತು.
ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಅಪರಾಹ್ನ 3 ಗಂಟೆಗೆ ಉಡುಪಿಯಲ್ಲಿ ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲಾ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಲಿರುವರು. ಬಳಿಕ ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರು ಮಾಹಿತಿ ನೀಡಿದರು.
ಈ ಸಂಬಂಧ ಸೂಕ್ತ ವ್ಯವಸ್ಥೆಯನ್ನು ಮಾಡುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಕಾರ್ಯಕ್ರಮ ಆಯೋಜಕರಿಗೆ ಸಚಿವರು ನಿರ್ದೇಶನಗಳನ್ನು ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ, ಜಿಪಂ ಸದಸ್ಯ ಜನಾಧನರ್ ತೋನ್ಸೆ ಪಾಲ್ಗೊಂಡಿದ್ದರು.
Next Story





