Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಖ್ಯಮಂತ್ರಿ ಬಗ್ಗೆ ಕೀಳು ಮಟ್ಟದ ಟೀಕೆಗೆ...

ಮುಖ್ಯಮಂತ್ರಿ ಬಗ್ಗೆ ಕೀಳು ಮಟ್ಟದ ಟೀಕೆಗೆ ಸಚಿವರಿಂದ ಖಂಡನೆ

ವಾರ್ತಾಭಾರತಿವಾರ್ತಾಭಾರತಿ10 Nov 2017 10:17 PM IST
share

ಮಂಗಳೂರು, ನ. 10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕೀಳು ಮಟ್ಟದ ಪದ ಬಳಕೆ ಮಾಡಿರುವುದನ್ನು ಅರಣ್ಯ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಮತ್ತು ಆಹಾರ ಮತ್ತು ನಾಗರಿಕೆ ಪೂರೈಕೆ ಸಚಿವ ಯು.ಟಿ.ಖಾದರ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ಬರು ಸಚಿವರು, ರಾಜ್ಯದ ಮುಖ್ಯಮಂತ್ರಿಯವರ ಬಗ್ಗೆ ಯಡಿಯೂರಪ್ಪನವರು ಕ್ಷುಲ್ಲಕವಾಗಿ ಮಾತನಾಡಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ತೀವ್ರ ವ್ಯಕ್ತಪಡಿಸುತ್ತದೆ ಎಂದರು.

ಬಿಜೆಪಿಯ ಪರಿವರ್ತನಾ ಯಾತ್ರೆಗೆ ಆರಂಭದಲ್ಲೇ ಜನರಿಲ್ಲದೆ ನೊಂದಿರುವ ಯಡಿಯೂರಪ್ಪ ಈ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಕಳೆದ ನಾಲ್ಕುವರ್ಷಗಳಲ್ಲಿ ಮುಖ್ಯಮಂತ್ರಿಯವರ ಸಾಧನೆಯಿಂದ ಕಂಗಾಲಾಗಿರುವ ಬಿಜೆಪಿಗರು ಮನಬಂದಂತೆ ಮಾತನಾಡಲು ಆರಂಭಿಸಿದ್ದಾರೆ. ಹಗರಣದಲ್ಲಿ ಜೈಲಿಗೆ ಹೋದ ಬಿಜೆಪಿಗರಿಗೆ ಮುಖ್ಯಮಂತ್ರಿಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ರಮಾನಾಥ ರೈ ಹೇಳಿದರು.

ಸಚಿವ ಯು.ಟಿ.ಖಾದರ್ ಮಾತನಾಡಿ, ಯಡಿಯೂರಪ್ಪವರು ಮುಖ್ಯಮಂತ್ರಿಯವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ. ಬಿಜೆಪಿಯ ಪರಿವರ್ತನಾ ರ್ಯಾಲಿ ವಿಫಲವಾಗಿದೆ. ಇದರಿಂದ ಹತಾಶೆಗೊಂಡು ಹೇಳಿಕೆ ನೀಡಿದ್ದಾರೆ. ಯಾತ್ರೆಯ ವೈಫಲ್ಯದ ಬಗ್ಗೆ ಪಕ್ಷದ ವರಿಷ್ಠರು ಬೈದಿರುವುದಕ್ಕೆ ಕಾಂಗ್ರೆಸ್‌ನ ಮೇಲೆ ಹರಿಹಾಯುವುದು ಸರಿಯಲ್ಲ ಎಂದರು.

ವೇಣುಗೋಪಾಲ್‌ರನ್ನು ಕರೆಸುತ್ತೇವೆ

ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುತ್ತಿರುವುದನ್ನು ಸಹಿಸಲಾರದೆ ಬಿಜೆಪಿಗರು ಅವರ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಅವರನ್ನು ಜಿಲ್ಲೆಗೆ ಕರೆಸುತ್ತೇವೆ ಎಂದು ರಮಾನಾಥ ರೈ ಹೇಳಿದರು.

ಆರೋಪಕ್ಕೆ ಸಂಬಂಧಿಸಿ ವೇಣುಗೋಪಾಲ್ ಅವರೇ ಉತ್ತರಿಸಲಿದ್ದಾರೆ. ಬಿಜೆಪಿಗರನ್ನು ಕೇಳಿ ನಾವು ವೇಣುಗೋಪಾಲ್‌ರನ್ನು ಜಿಲ್ಲೆಗೆ ಕರೆಸಬೇಕೇ? ವೇಣುಗೋಪಾಲ್‌ರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. ಅವರನ್ನು ಹೇಗೆ ಜಿಲ್ಲೆಗೆ ಕರೆಸಬೇಕು ಎಂಬುದು ನಮಗೆ ಗೊತ್ತು ಎಂದು ರೈ ಖಾರವಾಗಿ ಹೇಳಿದರು.

ಕಂಬಳದ ಮಸೂದೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇನ್ನು ಈ ಮಸೂದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾಗುವುದು. ಕಂಬಳ ನಡೆಸಲು ನನ್ನ ಬೆಂಬಲ ಇದೆ ಎಂದು ಈಗಾಗಲೇ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಸಚಿವ ರಮಾನಾಥ ರೈ ತಿಳಿಸಿದರು.

ಪಕ್ಷದಿಂದ ಹೊರಗೆ ಹೋದರೆ ಭವಿಷ್ಯವಿಲ್ಲ. ಸಂಘ ಪರಿವಾರ ಹಾಗೂ ಮತೀಯವಾದಿಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡುವುದಿಲ್ಲ. ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಹೋಗುತ್ತಾರೆ ಎಂಬುದು ಸುಳ್ಳು. ಅವರು ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಯಾಕೆ ಹಾಜರಾಗಿಲ್ಲ ಎಂಬುದು ಗೊತ್ತಿಲ್ಲ ಎಂದು ರೈ ಹೇಳಿದರು.

ಸರಕಾರಿ ಜಾಗವನ್ನು ಕಬಳಿಸಿದ್ದಾಗಿ ಹರಿಕೃಷ್ಣ ಬಂಟ್ವಾಳ ಅವರು ಮಾಡಿದ ಆರೋಪಕ್ಕೆ ಉತ್ತರಿಸಿದ ಸಚಿವ ರಮಾನಾಥ ರೈ ಅವರು, ಈ ಬಗ್ಗೆ ಸೂಕ್ತ ದಾಖಲೆಯನ್ನು ಒದಗಿಸಿ ಉತ್ತರ ನೀಡುವುದಾಗಿ ಹೇಳಿದರು. ಶಾಸಕ ಮೊಯ್ದಿನ್ ಬಾವಾ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಪಿ.ವಿ. ಮೋಹನ್, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X