ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವೈದ್ಯಕೀಯ ತಪಾಸಣಾ ಶಿಬಿರ

ಬಂಟ್ವಾಳ, ನ. 10: ದೇರಳಕಟ್ಟೆ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ವಿದ್ಯಾರ್ಥಿಗಳ ವೈದ್ಯಕೀಯ ತಪಾಸಣಾ ಶಿಬಿರ ಬಂಟ್ವಾಳದ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್ ಶಿಬಿರವನ್ನು ಉದ್ಘಾಟಿಸಿದರು. ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ.ಬೀನಿಯಂ ಆರೋಗ್ಯದ ಅಗತ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಶಾಲಾ ಸಂಚಾಲಕ ಮುಹಮ್ಮದ್ ಅಲಿ, ಕಾರ್ಯದರ್ಶಿ ಬಿ.ಎ ಮುಹಮ್ಮದ್ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯಶಿಕ್ಷಕಿ ಮೆಟಿಲ್ಡಾ ಡಿಕೋಸ್ತಾ ಸ್ವಾಗತಿಸಿ, ಕೆ.ಜಿ.ವಿಭಾಗದ ಮುಖ್ಯಸ್ಥೆ ಮಮತಾ ಸುವರ್ಣ ವಂದಿಸಿದರು. ಶಿಕ್ಷಕಿ ಶೈನಾರ್ ಕಾರ್ಯಕ್ರಮ ನಿರೂಪಿಸಿದರು.
ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ವಿವಿಧ ವಿಭಾಗದ ಸುಮಾರು 25 ವೈದ್ಯರು ಹಾಜರಿದ್ದು, ಕೆ.ಜಿ. ವಿಭಾಗದಿಂದ ಹತ್ತನೆ ತರಗತಿಯವರಿಗೆ 1,287 ವಿದ್ಯಾರ್ಥಿಗಳ ವೈದ್ಯಕೀಯ ತಪಾಸಣೆ ನಡೆಸಲಾಯಿತು.
Next Story





