ರಾಷ್ಟ್ರೀಯ ಜನತಾ ನ್ಯಾಯಾಲಯ: ಕೇಸುಗಳ ಇತ್ಯರ್ಥಕ್ಕೆ ಅವಕಾಶ
ಮಂಗಳೂರು, ನ. 12: ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ವಕೀಲರ ಸಂಘ, ಜಿಲ್ಲಾಡಳಿತ, ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ಸಹಕಾರಿ ಸಂಸ್ಥೆಗಳು, ವಿದ್ಯುತ್ ಇಲಾಖೆ, ಅಂಚೆ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ, ವಿಮಾ ಕಂಪನಿಗಳು ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವರ ಜಂಟಿ ಆಶ್ರಯದಲ್ಲಿ ಡಿ.9ರಂದು ದಕ್ಷಿಣ ಕ್ನನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳ ಆವರಣದಲ್ಲಿ ‘ರಾಷ್ಟ್ರೀಯ ಜನತಾ ನ್ಯಾಯಾಲಯ’ವನ್ನು ಹಮ್ಮಿಕೊಳ್ಳಲಾಗಿದೆ.
ಪಟ್ಟಣ ಪಂಚಾಯತ್‌ಗಳು, ತಾಲೂಕು ಪಂಚಾಯತ್‌ಗಳು, ಮಂಗಳೂರು ಮಹಾನಗರ ದೂರವಾಣಿ ಇಲಾಖೆ, ಅಂಚೆ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ ಹಾಗೂ ವಿದ್ಯುತ್ ಇಲಾಖೆಗಳು, ವಿದ್ಯುತ್, ಸಾರಿಗೆ, ಆರೋಗ್ಯ, ಅಂಚೆ, ವಿಮಾ ಸೇವೆಗಳು, ದೂರ ಸಂಪರ್ಕ, ನೀರು ಹಾಗೂ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ತೆಗೆದುಕೊಂಡಿದೆ.
ಇದರ ಸದುಪಯೋಗವನ್ನು ಕಕ್ಷಿದಾರರು ಪಡೆದುಕೊಳ್ಳುತ್ತಿದ್ದು, ಡಿ.9 ರಂದು ಹೆಚ್ಚಿನ ಪ್ರಕರಣಗಳನ್ನು ಬಗೆಹರಿಸಲು ಜಿಲ್ಲೆಯ ನ್ಯಾಯವಾದಿಗಳು ವಿವಿಧ ಬ್ಯಾಂಕುಗಳು, ವಿಮಾ ಸಂಸ್ಥೆಗಳು ಮತ್ತು ಇತರ ಇಲಾಖೆಗಳ ಮುಖ್ಯಸ್ಥರು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸುವಲ್ಲಿ ತಮ್ಮ ಸಂಪೂರ್ಣ ಸಹಕಾರವನ್ನು ನೀಡುವಂತೆ ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.







