ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು

ಮಂಡ್ಯ, ನ.12: ರಸ್ತೆಬದಿಯ ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳೇಬೂದನುರು ಗ್ರಾಮದಲ್ಲಿ ಶನಿವಾರ ತಡರಾತ್ರಿ ಜರುಗಿದೆ.
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೀನುಮರಿ ಉತ್ಪಾದನಾ ಕೇಂದ್ರದ ಬಳಿ ನಡೆದ ಘಟನೆಯಲ್ಲಿ ಲಾರೆನ್ಸ್(35) ಎಂಬ ವ್ಯಕ್ತಿ ಮೃತಪಟ್ಟದ್ದಾನೆ. ಚಿಕ್ಕಮಗಳೂರು ಮೂಲದವನಾದ ಆತ ಬೂದನೂರು ಗ್ರಾಮದಲ್ಲಿ ಮನೆ ಮಾಡಿಕೊಂಡು ಎಲೆಕ್ಟ್ರಿಕ್ ಕೆಲಸ ನಿರ್ವಹಿಸುತ್ತಿದ್ದನೆಂದು ಹೇಳಲಾಗಿದೆ.
ಸ್ಥಳಕ್ಕೆ ಸರ್ಕಲ್ ಇನ್ಸ್‍ಪೆಕ್ಟರ್ ಚಂದ್ರಶೇಖರ್, ಸಬ್‍ಇನ್ಸ್‍ಪೆಕ್ಟರ್ ಅಜರುದ್ದೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





