ಮೈಸೂರು: ವಿದ್ಯಾರ್ಥಿನಿ ಆತ್ಮಹತ್ಯೆ
ಮೈಸೂರು, ನ.13: ನಗರದ ಖಾಸಗಿ ಕಾಲೇಜಿನಲ್ಲಿ ಓದುತಿದ್ದ ವಿದ್ಯಾರ್ಥಿನಿಯೋರ್ವಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಚಿಕ್ಕಮಗಳೂರು ಮೂಲದ ಚಂದನ(21) ಎಂಬಾಕೆ ಸಿದ್ದಾರ್ಥನಗರದ ಪಿ.ಜಿ.ಯೊಂದರಲ್ಲಿ ವಾಸಿಸುತ್ತಿದ್ದಳು.
ಈಕೆ ಸೋಮವಾರ ಕಾಲೇಜಿಗೆ ತೆರಳದೆ ಪಿಜಿಯಲ್ಲಿಯೇ ಇದ್ದಳು ಎನ್ನಲಾಗಿದ್ದು, ಅವಳ ಜತೆ ಇದ್ದವರು ಕಾಲೇಜು ಮುಗಿಸಿ ವಾಪಸ್ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಸಿದ್ದಾರ್ಥನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈಕೆ ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದ್ದು, ಪ್ರೇಮವೈಫಲ್ಯದ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಸಿದ್ದಾರ್ಥನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





