ಶ್ಮಶಾನವಿಲ್ಲದ ಹಳ್ಳಿಗಳಲ್ಲಿ ಶ್ಮಶಾನ ಗುರುತಿಸಲು ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ
ಬೆಂಗಳೂರು, ನ.13: ಶ್ಮಶಾನವಿಲ್ಲದ ಹಳ್ಳಿಗಳಲ್ಲಿ ಶ್ಮಶಾನ ಗುರುತಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ವಕೀಲ ಮೊಹ್ಮದ್ ಇಕ್ಬಾಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲ ಮೊಹ್ಮದ್ ಇಕ್ಬಾಲ್ ಅವರು, ರಾಜ್ಯದ ನೂರಾರು ಹಳ್ಳಿಗಳಲ್ಲಿ ಮೃತರ ಅಂತ್ಯ ಸಂಸ್ಕಾರ ನೆರವೇರಿಸಲು ಶ್ಮಶಾನ ಜಾಗವಿಲ್ಲವಾಗಿದ್ದು, ಜಾಗವನ್ನು ಗುರುತಿಸಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠವು ಯಾವ್ಯಾವ ಗ್ರಾಮದಲ್ಲಿ ಶ್ಮಶಾನದ ಕೊರತೆ ಇದೆ ಎಂಬುದರ ಬಗ್ಗೆ ಸ್ಪಷ್ಟ ವರದಿ ನೀಡಿಲ್ಲ ಎಂದು ಅಭಿಪ್ರಾಯಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
Next Story





