Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.20 ರಿಂದ ಕೂಡಲಸಂಗಮದಿಂದ ಬೆಂಗಳೂರಿಗೆ...

ನ.20 ರಿಂದ ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ

ಸದಾಶಿವ ವರದಿ ಜಾರಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Nov 2017 8:59 PM IST
share

ಬೆಂಗಳೂರು, ನ.13: ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಮಾದಿಗರ ಸಂಘಟನೆಗಳ ಒಕ್ಕೂಟದ ವತಿಯಿಂದ ನ.20 ರಿಂದ ಡಿ.11 ರವರೆಗೆ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಡಾ.ಎನ್.ಮೂರ್ತಿ, ವೈಜ್ಞಾನಿಕ ತಳಹದಿಯ ಮೇಲೆ ಅವಲೋಕಿಸಿ ಪರಿಶಿಷ್ಟರ 101 ಉಪಜಾತಿಗಳಿಗೆ ಶಿಕ್ಷಣ, ರಾಜಕೀಯ, ಉದ್ಯೋಗ, ಕೃಷಿ, ವಾಣಿಜ್ಯ, ಕೈಗಾರಿಕೆ ಸೇರಿದಂತೆ ಅನೇಕ ವಿಷಯಗಳಲ್ಲಿ ಸ್ಥಾನಮಾನ ಹೊಂದಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿ ಮೀಸಲಾತಿ ಮತ್ತು ಸವಲತ್ತು ಪ್ರಮಾಣವನ್ನು ಹಂಚಿಕೆ ಮಾಡಿ ಸದಾಶಿವ ಅವರು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೂ ಅದನ್ನು ಜಾರಿ ಮಾಡಲು ಮುಂದಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮಾದಿಗ (ಎಡಗೈ) ಸಂಬಂಧಿಸಿದ 53 ಜಾತಿಗಳ ಜನಸಂಖ್ಯೆ ಶೇ.33.47 ರಷ್ಟಿದ್ದು, ಹೊಲೆಯ (ಬಲಗೈ) ಸಂಬಂಧಿಸಿದ 28 ಜಾತಿಗಳ ಜನಸಂಖ್ಯೆ ಶೇ.32 ರಷ್ಟಿದ್ದು, ಭೋವಿ, ಲಮಾಣಿ, ಕೊರಮ, ಕೊರಚ ಜಾತಿಗಳು ಶೇ.3 ಹಾಗೂ ಅಲೆಮಾರಿ, ಅಸ್ಪಶ್ಯರ 16ಜಾತಿಗಳ ಜನಸಂಖ್ಯೆ 10.96 ರಷ್ಟಿದ್ದು ಇವರಿಗೆ ಶೇ.1 ರಷ್ಟು ಒಳ ಮೀಸಲಾತಿ ಕಲ್ಪಿಸಬೇಕು ಎಂದು ಸದಾಶಿವ ವರದಿಯಲ್ಲಿ ತಿಳಿಸಲಾಗಿದೆ. ಆದರೆ ಸರಕಾರ ಇದನ್ನು ಜಾರಿ ಮಾಡಲು ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಹೇಳಿದರು.

ಪರಿಶಿಷ್ಟರಲ್ಲಿರುವ ಕೆಲವೊಂದು ಬಲಿಷ್ಠ ಜಾತಿಗಳು ಮಾದಿಗರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗುತ್ತಿದೆ. ಇದರಿಂದಾಗಿ ನಮಗೆ ಸಿಗಬೇಕಾದ ಮೀಸಲಾತಿ ಸಿಗುತ್ತಿಲ್ಲ. ಹೀಗಾಗಿ, ಕೂಡಲೇ ಸದಾಶಿವ ಆಯೋಗದ ವರದಿ ಸರಕಾರ ಜಾರಿ ಮಾಡಬೇಕು ಎಂದು ಹಲವಾರು ಬಾರಿ ಬೃಹತ್ ಪ್ರಮಾಣದ ಹೋರಾಟ ನಡೆಸಲಾಗಿದೆ ಎಂದರು.

ಡಿ.11 ಸಮಾವೇಶ: ಈ ವರದಿ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿ ಕೂಡಲಸಂಗಮದಿಂದ ಆರಂಭವಾಗುವ ಪಾದಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದ್ದು, ಡಿ.11 ರಂದು ಬೆಂಗಳೂರಿಗೆ ಆಗಮಿಸಲಿದೆ. ಅನಂತರ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಬೃಹತ್ ಪ್ರಮಾಣದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಬೇಡಿಕೆಗಳು: ಮಾದಿಗರಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಭೂ ರಹಿತ ಮಾದಿಗರಿಗೆ ಬಗರ್ ಹುಕುಂ ಸಾಗುವಳಿ ಸಕ್ರಮ ಮಾಡಬೇಕು. ಮಾದಿಗ ಸಂಘ-ಸಂಸ್ಥೆಗಳ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹಣ ಸಹಾಯ ಮಾಡಬೇಕು. ಶರಣ ಮಾದಾರ ಚೆನ್ನಯ್ಯ ಅಧ್ಯಯನ ಪೀಠ ಕೂಡಲಸಂಗಮದಲ್ಲಿ ಸ್ಥಾಪಿಸಬೇಕು. ಮುಂದಿನ ಚುನಾವಣೆಯಲ್ಲಿ ಮಾದಿಗ ಜನಾಂಗದವರಿಗೆ ಕನಿಷ್ಟ 25 ಜನರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X