Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ವೈದ್ಯರ ಮುಷ್ಕರ;...

ತುಮಕೂರು: ವೈದ್ಯರ ಮುಷ್ಕರ; ಚಿಕಿತ್ಸೆಗಾಗಿ ಪರದಾಡಿದ ರೋಗಿಗಳು

ವಾರ್ತಾಭಾರತಿವಾರ್ತಾಭಾರತಿ13 Nov 2017 11:35 PM IST
share
ತುಮಕೂರು: ವೈದ್ಯರ ಮುಷ್ಕರ; ಚಿಕಿತ್ಸೆಗಾಗಿ ಪರದಾಡಿದ ರೋಗಿಗಳು

ತುಮಕೂರು, ನ.13: ಕರ್ನಾಟಕ ಸರಕಾರ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಹೊರಟಿರುವ ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ಮಸೂದೆ-2017ನ್ನು ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು, ಪ್ರಯೋಗಾಲಯಗಳು, ಕ್ಲಿನಿಕ್‍ಗಳ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಿರತವಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರು ಸೇವೆ ದೊರೆಯದೆ ರೋಗಿಗಳು ಪರದಾಡುವ ಸ್ಥಿತಿ ಸೋಮವಾರ ನಿರ್ಮಾಣವಾಗಿತ್ತು.

ಎಲ್ಲಾ ಬಡವರಿಗೆ ಸುಲಭದಲ್ಲಿ ಆರೋಗ್ಯ ಸೇವೆ ದೊರೆಯುಬೇಕು ಎಂಬ ಉದ್ದೇಶದಿಂದ ರಾಜ್ಯ ಸರಕಾರ ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೇರುವ ಮೂಲಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ಜಾರಿಗೆ ತರಲು ಹೊರಟಿದೆ. ಇದನ್ನು ವಿರೋಧಿಸಿ ನವೆಂಬರ್ 2 ರಂದು ಒಂದು ದಿನದ ಮುಷ್ಕರವನ್ನು ಖಾಸಗಿ ಆಸ್ಪತ್ರೆಗಳು ಕೈಗೊಂಡಿದ್ದವು. ಅದರ ಮುಂದುವರೆದ ಭಾಗವಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಬೆಳಗಾವಿಯಲ್ಲಿ ಮುಷ್ಕರ ನಿರತವಾಗಿದ್ದು, ಇದರ ಹಿನ್ನೆಲೆಯಲ್ಲಿ ಸೋಮವಾರ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‍ಗಳು, ಪ್ರಯೋಗಾಲಯಗಳು ಕೆಲಸ ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.

ಯಾವುದೇ ಮುನ್ಸೂಚನೆಯಿಲ್ಲದೆ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರ ಆರಂಭಿಸಿದ ಹಿನ್ನೆಲೆಯಲ್ಲಿ ಇದರ ಅರಿವಿಲ್ಲದೆ ಚಿಕಿತ್ಸೆಗೆಂದು ಆಗಮಿಸಿದ್ದ ಸಾರ್ವಜನಿಕರು ಖಾಸಗಿ ಆಸ್ಪತ್ರೆಗಳ ಬಂದ್ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಪರದಾಡುವಂತಹ ಸ್ಥಿತಿ ನಿರ್ಮಾಣ ವಾಗಿತ್ತು.

ಸರಕಾರಿ ಆಸ್ಪತ್ರೆಗೆ ಹೆಚ್ಚಿದ ರೋಗಿಯ ಸಂಖ್ಯೆ: ಖಾಸಗಿ ಆಸ್ಪತ್ರೆಗಳ ಮುಷ್ಕರದ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯಬೇಕು ಎಂಬ ಉದ್ದೇಶದಿಂದ ಜಿಲ್ಲಾ ಸರ್ಜನ್ ಡಾ.ವೀರಭದ್ರಯ್ಯ ಅವರು ಖುದ್ದು ಹಾಜರಿದ್ದು, ಎಲ್ಲಾ ವೈದ್ಯರು ಸೇವೆಗೆ ಹಾಜರಾಗುವಂತೆ ಮಾಡಿ, ಬಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಕಾಲಕ್ಕೆ ದೊರೆಯುವಂತೆ ಮಾಡಿದ್ದಾರೆ.

ದಿನಕ್ಕೆ 800-1200ರವರೆಗೆ ಬರುತ್ತಿದ್ದ ರೋಗಿಗಳ ಸಂಖ್ಯೆ ಇಂದು 2000 ತಲುಪಿದ್ದು, ರೋಗಿಗಳನ್ನು ಪರೀಕ್ಷಿಸಿ, ವೈದ್ಯಕೀಯ ಸಲಹೆ ನೀಡುತಿದ್ದಾರೆ. ಒಳರೋಗಿಗಳ ಜೊತೆಗೆ, ಹೊರ ರೋಗಿಗಳ ನೋಡಿ ಚಿಕಿತ್ಸೆ ನೀಡುವ ಮೂಲಕ ಸರಕಾರಿ ಅಸ್ಪತ್ರೆಯ ಮೇಲಿರುವ ಒತ್ತಡವನ್ನು ನಿಭಾಯಿಸುವಲ್ಲಿ ಸರಕಾರಿ ವೈದ್ಯರು ಸಫಲರಾಗಿದ್ದಾರೆ.

ಪ್ರಯೋಗಾಲಯಗಳ ಮುಂದೆ ಕಾದು ಕುಳಿತ ಜನತೆ: ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ಬೆಂಬಲ ಸೂಚಿಸಿದ ಪ್ರಯೋಗಾಲಯಗಳು ಬಾಗಿಲು ಮುಚ್ಚಿದ್ದ ಪರಿಣಾಮ, ಪ್ರಯೋಗಾಲಯದ ಮುಂದೆ ರೋಗಿಗಳ ಕಾದು ಕುಳಿತಿದ್ದು ಕಂಡು ಬಂತ್ತು. ಅದರಲ್ಲಿಯೂ ಎಲ್ಲಾ ರೀತಿಯ ಪ್ರಯೋಗ ಉಪಕರಣಗಳನ್ನು ಹೊಂದಿರುವ ಟಿ.ಸಿ.ಎಚ್ ಮತ್ತು ಸಿದ್ದಗಂಗಾ ಪ್ರಯೋಗಾಲಯದ ಮುಂದೆ ಹೆಚ್ಚಿನ ರೋಗಿಗಳು ಕಂಡು ಬಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X