Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ...

ಯುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಅಗತ್ಯ: ಮುರಳೀಧರ್

ವಾರ್ತಾಭಾರತಿವಾರ್ತಾಭಾರತಿ13 Nov 2017 11:39 PM IST
share
ಯುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಅಗತ್ಯ: ಮುರಳೀಧರ್

ಶಿವಮೊಗ್ಗ, ನ.13: ಎಸೆಸೆಲ್ಸಿ ನಂತರ ವಿವಿಧ ವಿಷಯಗಳಲ್ಲಿ ಉನ್ನತ ಪದವಿ ಪಡೆದಿರುವ ಯುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವ ವೃತ್ತಿಯಾಧಾರಿತ ಕೌಶಲ್ಯ ತರಬೇತಿಗಳನ್ನು ಪಡೆದುಕೊಳ್ಳುವುದು ಅಗತ್ಯವಿದೆ ಎಂದು ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.

ನಗರದ ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ‘ವೃತ್ತಿ ಕೌಶಲ್ಯ-ಉನ್ನತಿಯ ಸಾಧ್ಯತೆ’ ಎಂಬ ವಿಷಯದ ಕುರಿತು ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ವಿಷಯದಲ್ಲಿ ನೈಪುಣ್ಯತೆ ಇದ್ದರೆ ಸರಳವಾಗಿ ಉದ್ಯೋಗ ಪಡೆಯಲು ಮತ್ತು ಸ್ವುದ್ಯೋಗ ಆರಂಭಿಸಲು ಸಾಧ್ಯವಾಗಲಿದೆ ಎಂದರು.

ಸ್ವತಂತ್ರ ಉದ್ಯೋಗ ಆರಂಭಿಸುವ ಯುವಕರಿಗೆ ಯೋಜನಾ ವರದಿ ತಯಾರಿಕೆ, ಯಂತ್ರಗಳು, ಕಚ್ಚಾವಸ್ತುಗಳು, ಮಾರುಕಟ್ಟೆ ಸೌಲಭ್ಯ ಮುಂತಾದ ಸೌಲಭ್ಯಗಳ ಕುರಿತು ಮಾಹಿತಿಯನ್ನು ನಿಗಮದ ವತಿಯಿಂದ ನೀಡಲಾಗುತ್ತಿದೆ. ಆಸಕ್ತ ಯುವಕರು ಎಲ್ಲ ರೀತಿಯ ಉದ್ಯೋಗಾವಕಾಶಗಳು ಮತ್ತು ಸರಕಾರದ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಲು ನಲ್ಲಿ ಮಾಹಿತಿಯನ್ನು ಸಲ್ಲಿಸಿ ನೋಂದಾಯಿಸಿಕೊಂಡು, ಎರಡು ದಿನಗಳ ಅವಧಿಯಲ್ಲಿ ಉಚಿತವಾಗಿ ಸೂಕ್ತ ಸಲಹೆ, ಮಾರ್ಗದರ್ಶನ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಕೆಲವು ತಿಂಗಳ ಅವಧಿಯಲ್ಲಿ ರಾಜ್ಯದ ಸುಮಾರು 12 ಜಿಲ್ಲೆಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದ್ದು, ತುಮಕೂರು, ಬೆಂಗಳೂರು, ರಾಮನಗರ ಸೇರಿದಂತೆ ಆಯ್ದ 5 ಜಿಲ್ಲೆಗಳಲ್ಲಿ ಡಿಸೆಂಬರ್ ಮಾಸಾಂತ್ಯದೊಳಗಾಗಿ ಉದ್ಯೋಗಮೇಳಗಳನ್ನು ಆಯೋಜಿಸಲಾಗುವುದು. ಉದ್ಯೋಗಮೇಳದಲ್ಲಿ ಭಾಗವಹಿಸಿದ ಶೇ.25ರಿಂದ 30ರಷ್ಟು ಯುವಕರಿಗೆ ಉದ್ಯೋಗಾವಕಾಶ ದೊರೆತಿದೆ ಮಾತ್ರವಲ್ಲ ಸ್ವಯಂ ಉದ್ಯೋಗ ಆರಂಭಿಸಲು ಹಾಗೂ ತರಬೇತಿ ಪಡೆಯಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು.

ಈ ಕಾರ್ಯಾಗಾರದಲ್ಲಿ ಕೌಶಲ್ಯ ಮಾಹಿತಿ, ಉದ್ಯೋಗ ಮೇಳ, ಸಂವಹನ ಕೌಶಲ್ಯ ಮಾರ್ಗದರ್ಶನ, ತರಬೇತಿ ಕಾರ್ಯಕ್ರಮ, ವೃತ್ತಿ ಮಾರ್ಗದರ್ಶನ, ಮಾಹಿತಿ ಕಾರ್ಯಾಗಾರ, ಸ್ವಯಂ ಉದ್ಯೋಗಾವಕಾಶ, ವಿದೇಶಗಳಲ್ಲಿನ ಉದ್ಯೋಗಾವಕಾಶ ಹಾಗೂ ಉದ್ಯಮಶೀಲತೆಗೆ ಪೂರಕವಾದ ವಿಷಯಗಳನ್ನು ತಜ್ಞರು ಆಗಮಿಸಿ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಹೆಚ್.ಆರ್.ಮಹದೇವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎನ್‌ಇಎಸ್‌ನ ಅಧ್ಯಕ್ಷ ಎ.ಎಸ್.ವಿಶ್ವನಾಥ್, ಉಪಾಧ್ಯಕ್ಷ ಅಶ್ವಥ್ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಎಸ್.ಎನ್.ನಾಗರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಡಾ.ಅಜಿತ್ ಧಂತಿ, ಡಾ.ಮಂಜುನಾಥ್ ಪಿ., ಮಲ್ಲೇಶ್‌ಕುಮಾರ್ ಕೆ.ಎಸ್., ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X