Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಟಲಿ ಗೋಲ್‌ಕೀಪರ್ ಬಫನ್ ಕಣ್ಣೀರಿನ ವಿದಾಯ

ಇಟಲಿ ಗೋಲ್‌ಕೀಪರ್ ಬಫನ್ ಕಣ್ಣೀರಿನ ವಿದಾಯ

ವಾರ್ತಾಭಾರತಿವಾರ್ತಾಭಾರತಿ14 Nov 2017 9:27 PM IST
share
ಇಟಲಿ ಗೋಲ್‌ಕೀಪರ್ ಬಫನ್ ಕಣ್ಣೀರಿನ ವಿದಾಯ

ಮಿಲಾನ್, ನ.14: ಆರನೆ ಬಾರಿ ವಿಶ್ವಕಪ್‌ನಲ್ಲಿ ಭಾಗವಹಿಸುವ ಮೂಲಕ ದಾಖಲೆ ನಿರ್ಮಿಸುವ ಕನಸು ಕಂಡಿದ್ದ ಇಟಲಿ ತಂಡದ ಹಿರಿಯ ಗೋಲ್‌ಕೀಪರ್ ಗಿಯಾನ್‌ಲುಗಿ ಬಫನ್ ಸೋಮವಾರ ಕಣ್ಣೀರಿನ ವಿದಾಯ ಹೇಳಿದ್ದಾರೆ.

 2018ರಲ್ಲಿ ರಶ್ಯದಲ್ಲಿ ವಿಶ್ವಕಪ್‌ನಲ್ಲಿ ಆಡುವುದರೊಂದಿಗೆ ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿ ಬದುಕಿಗೆ ವಿದಾಯ ಹೇಳುವ ಯೋಚನೆಯಲ್ಲಿದ್ದ ಬಫನ್ ಸ್ವೀಡನ್ ವಿರುದ್ಧ ವಿಶ್ವಕಪ್‌ನ 2ನೆ ಪ್ಲೇ-ಆಫ್ ಪಂದ್ಯದ ಬಳಿಕ ದಿಢೀರನೆ ನಿವೃತ್ತಿ ಘೋಷಿಸಿದ್ದಾರೆ. ಸ್ವೀಡನ್ ವಿರುದ್ಧ ಸೋತಿರುವ ಇಟಲಿ ಸುಮಾರು 60 ವರ್ಷಗಳ ಬಳಿಕ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾಗಿದೆ.

  ಕಳೆದ 20 ವರ್ಷಗಳಿಂದ ಇಟಲಿ ತಂಡವನ್ನು ಪ್ರತಿನಿಧಿಸಿರುವ 39ರ ಹರೆಯದ 175 ಪಂದ್ಯಗಳನ್ನು ಆಡಿ ದಾಖಲೆ ನಿರ್ಮಿಸಿದ್ದಾರೆ. ಸ್ವೀಡನ್ ವಿರುದ್ಧ ಆಡಿರುವ 2018ರ ವಿಶ್ವಕಪ್‌ನ ಎರಡನೆ ಪ್ಲೇ-ಆಫ್ ಪಂದ್ಯವು ಬಫನ್‌ರ ಕೊನೆಯ ಪಂದ್ಯವಾಗಿದೆ.

1998ರ ವಿಶ್ವಕಪ್ ಪ್ಲೇ-ಆಫ್ ಪಂದ್ಯದಲ್ಲಿ ರಶ್ಯ ವಿರುದ್ಧ ಆಡುವ ಮೂಲಕ ತನ್ನ 19ನೆ ವಯಸ್ಸಿನಲ್ಲಿ ಬಫನ್ ಫುಟ್ಬಾಲ್‌ಗೆ ಪಾದಾರ್ಪಣೆಗೈದಿದ್ದರು. ವೃತ್ತಿಜೀವನದಲ್ಲಿ ಈತನಕ ಐದು ಬಾರಿ ವಿಶ್ವಕಪ್‌ನಲ್ಲಿ ಭಾಗವಹಿಸಿರುವ ಅವರು ಆರನೆ ಬಾರಿ ವಿಶ್ವಕಪ್ ಆಡಿದ ಮೊದಲ ಆಟಗಾರನಾಗುವ ಕನಸು ಕಂಡಿದ್ದರು. ಆದರೆ ಅವರ ಕನಸು ಕೈಗೂಡಲಿಲ್ಲ. 2006ರಲ್ಲಿ ಫಿಫಾ ವಿಶ್ವಕಪ್‌ನ್ನು ಎತ್ತಿ ಹಿಡಿದಿದ್ದರು.

‘‘ಕ್ರೀಡಾದೃಷ್ಟಿಯಿಂದ ಇದು ನನ್ನ ಜೀವನದ ಅತ್ಯಂತ ನಿರಾಶಾದಾಯಕ ಕ್ಷಣ..ನನಗೆ ಮಾತನಾಡಲು ಪದಗಳೇ ಸಿಗುತ್ತಿಲ್ಲ. ಇಟಲಿ ತಂಡಕ್ಕೆ ಖಂಡಿತವಾಗಿಯೂ ಉತ್ತಮ ಭವಿಷ್ಯವಿದೆ. ತಂಡದಲ್ಲಿ ಹಲವು ಪ್ರತಿಭಾವಂತ ಆಟಗಾರರಿದ್ದಾರೆ’’ ಎಂದು ಬಫನ್ ಹೇಳಿದರು.

ಜುವೆಂಟಸ್ ಪರ 8 ಸೀರಿಸ್ ಎ ಪ್ರಶಸ್ತಿಯನ್ನು ಜಯಿಸಿರುವ ಬಫನ್ ಇಟಲಿ ತಂಡ ಜರ್ಮನಿಯಲ್ಲಿ 2006ರಲ್ಲಿ ಫಿಫಾ ವಿಶ್ವಕಪ್ ಜಯಿಸಲು ಪ್ರಮುಖ ಪಾತ್ರವಹಿಸಿದ್ದರು. ಯುಇಎಫ್‌ಎ ವರ್ಷದ ಆಟಗಾರ ಪ್ರಶಸ್ತಿ ಪಡೆದ ಏಕೈಕ ಗೋಲ್‌ಕೀಪರ್ ಬಫನ್.

ಕ್ರೀಡಾಕುಟುಂಬದಲ್ಲಿ ಜನಿಸಿರುವ ಬಫನ್ ತಾಯಿ ಡಿಸ್ಕಸ್ ಥ್ರೋವರ್ ಹಾಗೂ ತಂದೆ ವೇಟ್‌ಲಿಫ್ಟರ್ ಆಗಿದ್ದರು. 12ರ ಹರೆಯದಲ್ಲಿ ಗೋಲ್‌ಕೀಪರ್ ವೃತ್ತಿ ಆರಂಭಿಸಿದ ಬಫನ್ 40ನೆ ಹರೆಯದ ತನಕ ವಿಶ್ವ ಶ್ರೇಷ್ಠ ಗೋಲ್‌ಕೀಪರ್ ಆಗಿ ಗುರುತಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X