ಸಕಾಲಕ್ಕೆ ಚಿಕಿತ್ಸೆ ದೊರಕದೆ ವಿದ್ಯಾರ್ಥಿನಿ ಮೃತ್ಯು
ಖಾಸಗಿ ಆಸ್ಪತ್ರೆಯ ವೈದ್ಯರ ಮುಷ್ಕರಿಂದ ವಿದ್ಯಾರ್ಥಿನಿ ಮೃತ್ಯು: ಆರೋಪ
ಶಿವಮೊಗ್ಗ, ನ.15: ರಕ್ತದೊತ್ತಡ ಕುಸಿತದಿಂದ ವಿದ್ಯಾರ್ಥಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಹಿರೇಕಾರಕ ಗ್ರಾಮದಲ್ಲಿ ಕಳೆದ ಸೋಮವಾರದಂದು ನಡೆದಿದೆ.
ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದ ಕಾರಣದಿಂದ ಸಕಾಲದಲ್ಲಿ ಚಿಕಿತ್ಸೆ ದೊರಕದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆಂಬ ಆರೋಪ ಕೇಳಿ ಬಂದಿದೆ.
7ನೆ ತರಗತಿ ಕೆ.ಎ.ಅನನ್ಯ (12) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಶಾಲೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಕೆ.ಎ.ಅನನ್ಯಳನ್ನು ತಕ್ಷಣ ಆನಂದಪುರಂನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಖಾಸಗಿ ಆಸ್ಪತ್ರೆ ವೈದ್ಯರು ಮುಷ್ಕರ ನಡೆಸುತ್ತಿದ್ದ ಕಾರಣದಿಂದ ಸಕಾದಲ್ಲಿ ವಿದ್ಯಾರ್ಥಿನಿಗೆ ಚಿಕಿತ್ಸೆ ದೊರಕದೆ ಮೃತಪಟ್ಟಿದ್ದಾಳೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ.
Next Story





