ರಸ್ತೆ ಅಪಘಾತ: ಗಾಯಾಳು ಬೈಕ್ ಸವಾರ ಮೃತ್ಯು
ಪುತ್ತೂರು, ನ. 15: ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪುತ್ತೂರು ತಾಲುಕಿನ ಮಾಡ್ನೂರು ಗ್ರಾಮದ ಕಾವು ನೇರೋಲ್ತಡಿ ಎಂಬಲ್ಲಿನ ನಿವಾಸಿ ಜಗದೀಶ್ ರೈ (50) ಮೃತರು ಎಂದು ಗುರುತಿಸಲಾಗಿದೆ. ಪುತ್ತೂರು ಕಡೆಗೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಟ್ಯಾರ್ ಎಂಬಲ್ಲಿ ಇವರು ಚಲಾಯಿಸುತ್ತಿದ್ದ ಬೈಕ್ ಮತ್ತು ಲಾರಿಯೊಂದರ ನಡುವೆ ಢಿಕ್ಕಿ ಸಂಭವಿಸಿತ್ತು. ಈ ವೇಳೆ ರಸ್ತೆಗೆಸೆಯಲ್ಪಟ್ಟ ಜಗದೀಶ್ ರೈ ಗಂಭೀರ ಗಾಯಗೊಂಡಿದ್ದರು. ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Next Story





